Advertisement
ಇಂದು (ಮಂಗಳವಾರ, ಜೂನ್ 15) ಆರೋಗ್ಯ ಸಚಿವಾಲಯದ ಸುದ್ದಿಗೋಷ್ಠಿಯನ್ನು ಉದ್ದೇಶಿದಸಿ ಮಾತನಾಡಿದ ಪೌಲ್, ಕೋವಿಡ್ ಸೋಂಕು ದೇಶದಾದ್ಯಂತ ಗಣನೀಯವಾಗಿ ಇಳಿಮುಖ ಕಾಣತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಅನ್ ಲಾಕ್ ಮಾಡಲಾಗುತ್ತಿದೆ. ಅನ್ ಲಾಕ್ ಮಾಡಲಾಗುತ್ತಿದೆ ಎಂಬ ಕಾರಣಕ್ಕೆ ಜನರು ಸಾಮಾಜಿಕ ಅಂತರ ಕಾಪಾಡುವುದನ್ನು ಮರೆಯಬಾರದು, ಶಿಸ್ತು ಮತ್ತು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
Related Articles
Advertisement
ಆರೋಗ್ಯ ಸಚಿವಾಲಯದ ಸಹ ಕಾರ್ಯದರ್ಶಿ ಲವ್ ಅಗರ್ವಾಲ್ ಮಾತನಾಡಿ, ಭಾರತದಲ್ಲಿ ಕೋವಿಡ್ ಮಹಾ ಪಿಡುಗಿನ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. ಕೋವಿಡ್ ಸೋಂಕಿನ ಹೊಸ ಪ್ರಕರಣಗಳಲ್ಲಿ ಗಣನೀಯ ಇಳಿಕೆ ಮುಂದುವರಿಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಸದ್ಯ 9.13 ಲಕ್ಷ ಸಕ್ರಿಯ ಪ್ರಕರಣಗಳಿವೆ ಎಂದು ಅವರು ತಿಳಿಸಿದ್ದಾರೆ.
ಭಾರತದಲ್ಲಿ ಈಗಾಗಲೇ ಪತ್ತೆಯಾಗಿರುವ ಬಿ.1.617.2 ರೂಪಾಂತರಿ ಸೋಂಕಿಗೆ ವಿಶ್ವ ಆರೋಗ್ಯ ಸಂಸ್ಥೆಯು ಡೆಲ್ಟಾ ಸೋಂಕು ಎಂದು ಹೆಸರಿಟ್ಟಿದೆ. ಹೊಸ ರೂಪಾಂತರಿ ಸೋಂಕುಗಳನ್ನು ಯಾವುದೇ ದೇಶದ ಹೆಸರಿನಿಂದ ಉಲ್ಲೇಖಿಸುವುದು ಬೇಡ ಎಂಬ ಕಾರಣದಿಂದ ಡೆಲ್ಟಾ ರೂಪಾಂತರಿ ಸೋಂಕು ಎಂದು ಹೆಸರಿಟ್ಟಿದೆ. ಆದರೆ, ಈಗ ಇದೇ ಡೆಲ್ಟಾ ರೂಪಾಂತರಿ ಸೋಂಕು ಮತ್ತೆ ರೂಪಾಂತರಗೊಂಡಿದೆ. ರೂಪಾಂತರಗೊಂಡ ಹೊಸ ಪ್ರಭೇದದ ಸೋಂಕಿಗೆ ಡೆಲ್ಟಾ ಪ್ಲಸ್ ಅಥವಾ ಎವೈ.1 ಎಂದು ಹೆಸರಿಡಲಾಗಿದೆ.
ಇದನ್ನೂ ಓದಿ : ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿ