ಮೈಸೂರು: ಮೈಸೂರಿನಲ್ಲಿ ಮತ್ತೆ ಮೂರು ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ.
ನಿನ್ನೆ ಸಂಜೆ ಮೂರು ಕೇಸ್‌ಗಳು ದೃಢವಾಗಿದ್ದು, ರಾಜ್ಯದಲ್ಲಿ ಒಟ್ಟು ನಾಲ್ಕು ಡೆಲ್ಟಾ ಪ್ಲಸ್ ಪ್ರಕರಣಗಳು ದಾಖಲಾಗಿದ್ದವು.
ಬೆಂಗಳೂರಿನ ನಿಮ್ಹಾನ್ಸ್ ಪ್ರಯೋಗಾಲಯದಿಂದ ಅಧಿಕೃತವಾದ ಮಾಹಿತಿ ಹೊರಬಿದ್ದಿದ್ದು, ನಿನ್ನೆ ಪತ್ತೆಯಾದ ಮೂವರು ಡೆಲ್ಟಾ ಪ್ಲಸ್ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ಮೊದಲ ಡೆಲ್ಟಾ ಪ್ಲಸ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲೂ ಡೇಂಜರಸ್ ಡೆಲ್ಟಾ ಆತಂಕ ಮನೆಮಾಡಿತ್ತು. ರೂಪಾಂತರಗೊಂಡ ಕೊರೊನಾ ವೈರಸ್ ಡೆಲ್ಟಾ ಪ್ಲಸ್, ಕೊರೊನಾ ಹಿಂದಿನ ರೂಪಾಂತರಕ್ಕಿಂತಲೂ ಮಿಂಚಿನ ವೇಗದಲ್ಲಿ ಹರಡುವುದು. ಅಲ್ಲದೇ ಅತ್ಯಂತ ಪರಿಣಾಮಕಾರಿ ಎಂದು ಕೇಂದ್ರ ಸರ್ಕಾರವೇ ಎಚ್ಚರಿಕೆ ಕೊಟ್ಟಿದೆ.
ಇದನ್ನೂ ಓದಿ: ಡೆಲ್ಟಾ ಮತ್ತು ಡೆಲ್ಟಾ ಪ್ಲಸ್: ವ್ಯತ್ಯಾಸವೇನು? ಯಾವುದು ಹೆಚ್ಚು ಅಪಾಯಕಾರಿ?