Advertisement
ಪ್ರತಿಭಟನೆ ನೇತೃತ್ವ ವಹಿಸಿದ್ದ ನೆಲೋಗಿ ವಲಯ ಘಟಕದ ಅಧ್ಯಕ್ಷ ಯಲ್ಲಪ್ಪ ಬಂಕಲಗಿ ಮಾತನಾಡಿ, ಕೋಚಿಡ್ ಮಹಾಮಾರಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗಲಿಲ್ಲ. ಈಗ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ನೂರಾರು ರೈತರ ಬೆಳೆಗಳು ಹಾಗೂ ಫಲವತ್ತಾದ ಜಮೀನು ಹಾಳಾಗಿದೆ. ಆದ್ದರಿಂದ ರೈತರ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಕೋವಿಡ್ ವಾರಿಯರ್ಸ್‌ಗಳಾಗಿ ಹಗಲಿರುಳು ಶ್ರಮವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ದಿನಗೂಲಿಯಂತೆ ತಿಂಗಳಿಗೆ 12 ಸಾವಿರ ರೂ. ನೀಡಬೇಕು. ಅಂಕಲಗಾ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ವಸತಿ ನಿಲಯ ಸ್ಥಾಪನೆ ಮಾಡಬೇಕು. ನೆಲೋಗಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೂಲ ಸೌಕರ್ಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.
Advertisement
ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ನಿರಶನ
05:04 PM Sep 25, 2020 | Suhan S |
Advertisement
Udayavani is now on Telegram. Click here to join our channel and stay updated with the latest news.