Advertisement

CM Siddaramaiah ರಾಜೀನಾಮೆಗೆ ಆಗ್ರಹ: ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

12:22 AM Sep 25, 2024 | Team Udayavani |

ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಅಭಿ ಯೋಜನೆಗೆ ಆದೇಶಿಸಿದ್ದನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತತ್‌ಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Advertisement

ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಮಾತನಾಡಿ, ಸಿಎಂ ಅವರು ನ್ಯಾಯಾಲಯದ ತೀರ್ಪನ್ನು ಒಪ್ಪಿ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು ಎಂದು ಆಗ್ರಹಿಸಿದರು. ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ ನ್ಯಾಯಾಲಯದ ಆದೇಶಕ್ಕೆ ಮನ್ನಣೆ ನೀಡಿ ಸಿದ್ದರಾಮಯ್ಯ ಅವರು ತತ್‌ಕ್ಷಣ ರಾಜೀನಾಮೆ ನೀಡಲಿ ಎಂದರು.

ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಸಿದ್ದರಾಮಯ್ಯ ಯಾವ ಕೋರ್ಟ್‌ ಮೆಟ್ಟಿಲೇರಿದರೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಪ್ರಮುಖರಾದ ದಿನಕರ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ಶಿಲ್ಪಾ ಸುವರ್ಣ, ರಾಜೇಶ್‌ ಕಾವೇರಿ, ಶ್ರೀಶ ನಾಯಕ್‌ ಪೆರ್ಣಂಕಿಲ, ವಿಜಯ ಕೊಡವೂರು, ಸಂಧ್ಯಾ ರಮೇಶ್‌, ಶ್ಯಾಮಲಾ ಕುಂದರ್‌, ನಯನಾ ಗಣೇಶ್‌, ಶ್ರೀನಿಧಿ ಹೆಗ್ಡೆ, ಶಿವಕುಮಾರ್‌ ಅಂಬಲಪಾಡಿ ಮುಂತಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next