Advertisement
ಮಾಯಕೊಂಡ ಕ್ಷೇತ್ರದ ಅಣಜಿ ಗ್ರಾಮದಲ್ಲಿ ಕಾಂಗ್ರೆಸ್‌ನಿಂದ ಏರ್ಪಡಿಸಿದ್ದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. ಕೋವಿಡ್-19 ಸಮಯದಲ್ಲಿ ಕೃಷಿ ಕಾಯ್ದೆಯನ್ನು ಲೋಕಸಭೆಯಲ್ಲಾಗಲೀ, ಕೃಷಿ ತಜ್ಞರ ಜೊತೆಯಲ್ಲಾಗಲೀ ಇಲ್ಲವೇ ರೈತರೊಂದಿಗೆ ಚರ್ಚಿಸದೆ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೇವಲ ಆದೇಶದ ಮೂಲಕ ಕಾಯ್ದೆಯನ್ನು ಜಾರಿಗೊಳಿಸಿರುವುದು ಖಂಡನೀಯ. ದೇಶದ ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
Related Articles
Advertisement
ಜಿಪಂ ಸದಸ್ಯ ಓಬಳಪ್ಪ, ಎಪಿಎಂಸಿ ಮಾಜಿ ಉಪಾಧ್ಯಕ್ಷ ರಾಜೇಂದ್ರ, ತಾಪಂ ಸದಸ್ಯ ಚಂದ್ರಪ್ಪ, ಕಾಂಗ್ರೆಸ್ ಮುಖಂಡ ಕೊಟ್ರೇಶ್ ನಾಯ್ಕ, ರಾಜಾ ನಾಯ್ಕ, ಅಂಜಿನಪ್ಪ, ಮಾಯಕೊಂಡ ರುದ್ರೇಶ್, ಕೊಗ್ಗನೂರು ಹನುಮಂತಪ್ಪ ಮತ್ತಿತತರು ಮಾತನಾಡಿ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮತ್ತು ಕೃಷಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿದರು.
ಪ್ರತಿಭಟನೆ ಮೆರವಣಿಗೆ ಗ್ರಾಮದ ದಿಗಂಬರ ದೇವಸ್ಥಾನದಿಂದ ಹೊರಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಉಪತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ತಾಪಂ ಮಾಜಿ ಸದಸ್ಯ ಶಂಭುಲಿಂಗಪ್ಪ, ಕಾಂಗ್ರೆಸ್ ಮುಖಂಡ ಆಲೂರು ವೀರಭದ್ರಪ್ಪ, ಆನಗೋಡು ಗ್ರಾಪಂ ಮಾಜಿ ಅಧ್ಯಕ್ಷ ರವಿ, ಅಣಜಿ ಗ್ರಾಪಂ ಅಧ್ಯಕ್ಷೆ ಜ್ಯೋತಿ ಶಶಿಕುಮಾರ್, ಪಿ.ಎನ್. ಶಿವಪ್ರಕಾಶ್, ಅಣಜಿಹೊನ್ನಪ್ಪ, ಬಸವಲಿಂಗಪ್ಪ, ರಾಮಗೊಂಡನಹಳ್ಳಿ ಶರಣಪ್ಪ, ಮೆಳ್ಳೆಕಟ್ಟೆ ಹನುಮಂತಪ್ಪ, ಆಲೂರು ಸೋಮಣ್ಣ, ಹುಲಿಕಟ್ಟೆ ಗ್ರಾಪಂ ಅಧ್ಯಕ್ಷ ಕರಿಯಪ್ಪ, ಬಸವರಾಜ್, ಜ್ಞಾನೇಶ್, ಮ್ಯಾಸರಹಳ್ಳಿ ಪ್ರಭು, ಗುಮ್ಮನೂರು ಲೋಕೇಶ್, ಸಿದ್ದನೂರು ಪ್ರಕಾಶ್, ಕಂದನಕೋವಿ ದೇವೇಂದ್ರಪ್ಪ, ಗ್ರಾ.ಪಂ. ಸದಸ್ಯರುಗಳು, ಕಾಂಗ್ರೆಸ್ ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.