Advertisement

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಸಮಂಜಸವಲ್ಲ: ಮುರುಗೇಶ್ ನಿರಾಣಿ

10:54 AM Nov 01, 2021 | Team Udayavani |

ಕಲಬುರಗಿ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ನಗರದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

Advertisement

ಇಲ್ಲಿನ ನಗರೇಶ್ವರ ಶಾಲಾ ಆವರಣದಲ್ಲಿ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಸಚಿವರು ಪೂಜೆ ಸಲ್ಲಿಸಿದರು‌. ನಂತರ ಧ್ವಜಾರೋಹಣ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ, ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಸರ್ಕಾರ ಸಾಕಷ್ಟು ಮುತುವರ್ಜಿ ವಹಿಸಿದೆ‌. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ನಿರ್ಲಕ್ಷಿಸುತ್ತಿಲ್ಲ ಎಂದರು.

ಇದನ್ನೂ ಓದಿ:ಕಲ್ಯಾಣ ಕರ್ನಾಟಕದ ಅನುದಾನ ಮೂರು ಸಾವಿರ ಕೋಟಿಗೆ ಹೆಚ್ಚಳ: ಸಿಎಂ ಘೋಷಣೆ

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ ಸಮಂಜಸವಲ್ಲ. ಈ ಭಾಗದ ಪ್ರಗತಿಗಾಗಿ ಕಲ್ಯಾಣ ‌ಕರ್ನಾಟಕ ಪ್ರದೇಶದ ಅಭಿವೃದ್ಧಿ ಮಂಡಳಿಗೆ ನೀಡುತ್ತಿದ್ದ 1,500 ಕೋಟಿ ರೂ. ಜತೆಗೆ ಹೆಚ್ಚುವರಿಯಾಗಿ 1,500 ಕೋಟಿ ಸೇರಿಸಿ 3 ಸಾವಿರ ಕೋಟಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ ಎಂದರು.

Advertisement

ಅಲ್ಲದೇ, ಜಿಲ್ಲೆಯಲ್ಲಿ ವಿಮಾನಯಾನ ಮತ್ತು ರಕ್ಷಣಾ ಇಲಾಖೆಗೆ ಪೂರಕವಾಗಿ ಘಟಕ ಆರಂಭಿಸುವ ಚಿಂತನೆ ನಡೆದಿದೆ. ಜಿಲ್ಲೆಯಲ್ಲಿ ಟೆಕ್ಸ್‌ಟೈಲ್ ಪಾರ್ಕ್ ಆರಂಭಿಸಲು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಭೂಕಂಪನ ಪೀಡಿತ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ‌ಗ್ರಾಮಕ್ಕೆ ಭೇಟಿ ನೀಡದಿರುವ‌ ಕುರಿತು ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಅಲ್ಲಿಗೆ ಭೇಟಿ ನೀಡದೇ ಇದ್ದರೂ ನಿರಂತರವಾಗಿ ಮಾಹಿತಿಯನ್ನು ತರಿಸಿಕೊಂಡಿದ್ದೇನೆ. ಸಂಸದರು, ಶಾಸಕರು ಅಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಭೂಗರ್ಭಶಾಸ್ತ್ರಜ್ಞರು ಭೇಟಿ ನೀಡಿದ್ದಾರೆ. ಅವರ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಶೀಘ್ರವೇ ನಾನು ಕೂಡ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next