ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ರಸ್ತೆ ಸಂಚಾರ ತಡೆ ನಡೆಸಿದರು. ಈ ಹಂತದಲ್ಲಿ ಪೊಲೀಸರು ಹಾಗೂ ಪ್ರತಿಭಟನಾನಿರತರ ನಡುವೆ ಮಾತಿನ ಚಕಮಕಿ ನಡೆಯಿತು. ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಬೆಳಗ್ಗೆ 11ಕ್ಕೆ ರಸ್ತೆ ಸಂಚಾರ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನವೊಲಿಸಲು ಯತ್ನಿಸಿದರು. ಈ ಹಂತದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಮಾತನಾಡಿದ ಸಂಘಟನೆ ವಿದ್ಯಾರ್ಥಿ ಮುಖಂಡರು, ಜಿಲ್ಲೆಯಾದ್ಯಂತ ನಗರ-ಗ್ರಾಮೀಣ ಪ್ರದೇಶದಲ್ಲಿ ಶಾಲಾ-ಕಾಲೇಜುಗಳ ಸಮಯಕ್ಕೆ ಬಸ್ ಓಡಿಸದ ಕಾರಣ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಸಮಸ್ಯೆ ಆಗುತ್ತಿದೆ. ಇದರಿಂದಾಗಿಯೇ ಜಿಲ್ಲೆಯ ಓದುವ ಅರ್ಹರಿದ್ದ ವಿದ್ಯಾರ್ಥಿ- ವಿಧ್ಯಾರ್ಥಿನಿಯರು ಶಾಲೆ ಬಿಡುತ್ತಿದ್ದಾರೆ. ಮತ್ತೂಂದೆಡೆ ಕೆಲ ಚಾಲಕ, ನಿರ್ವಾಹಕರಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು. ವಿಜಯಪುರ ನಗರದಲ್ಲಿ 25,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಿ ಬರಲು ನಗರ ಸಾರಿಗೆ ಬಸ್ ಸೌಲಭ್ಯವಿಲ್ಲ. ಕೂಡಲೇ ಶಾಲಾ-ಕಾಲೇಜುಗಳ ಸಮಯಕ್ಕೆ ತಕ್ಕಂತೆ ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾದ್ಯಂತ ಎಲ್ಲಾ ಎನ್‌ಇಕೆಆರ್‌ಟಿಸಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಂಸ್ಥೆಯ
ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಪ್ರತಿನಿಧಿಗಳು ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭವರವಸೆ ನೀಡಿದರು.
Advertisement