Advertisement

ಸಮಗ್ರ ಕನ್ನಡ ವಿಧೇಯಕದಲ್ಲಿ ತಿದ್ದುಪಡಿಗೆ ಒತ್ತಾಯ; ಮರುಪರಿಶೀಲನೆಗೆ ಸರ್ಕಾರದ ಚಿಂತನೆ

10:27 AM Oct 29, 2022 | Team Udayavani |

ಬೆಂಗಳೂರು: ಕಳೆದ ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ಮಂಡನೆಯಾಗಿದ್ದ ಸಮಗ್ರ ಕನ್ನಡ ವಿಧೇಯಕಕ್ಕೆ ಕೆಲ ತಿದ್ದುಪಡಿ‌ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಕನ್ನಡದ ಪ್ರಾತಿನಿಧಿಕ ಸಂಸ್ಥೆಗಳಿಂದ ಒತ್ತಡ ವ್ಯಕ್ತವಾಗಿದ್ದು ಈ ಹಿನ್ನೆಲೆಯಲ್ಲಿ ಸರಕಾರ ಮರುಪರಿಶೀಲನೆ ಬಗ್ಗೆ ಚಿಂತನೆ ನಡೆಸಿದೆ.

Advertisement

ಸಾಹಿತ್ಯ ಪರಿಷತ್ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಅನುಷ್ಠಾನ ಸಮಿತಿಯಲ್ಲಿ ಸೇರಿಸುವಂತೆ ಒತ್ತಾಯ ಕೇಳಿ ಬಂದಿದೆ. ಆದರೆ ಈ ವಿಚಾರದಲ್ಲಿ ಸರಕಾರ ನಿಲುವು ಬದಲಿಸದೇ ಇರಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಆದರೆ ಕೆಲ ಆಡಳಿತಾತ್ಮಕ ವಿಚಾರಗಳಲ್ಲಿ ಸಡಿಲತೆ‌ ನೀಡುವ ಸಾಧ್ಯತೆ ಇದೆ.

ಹೀಗಾಗಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕೆಲ ತಿದ್ದುಪಡಿಯೊಂದಿಗೆ ಮರು ಮಂಡನೆ ಮಾಡುವ ಸಾಧ್ಯತೆ ಇದೆ.

ಈ ವಿಧೇಯಕಕ್ಕೆ ಸಂಬಂಧಪಟ್ಟಂತೆ ರಾಜ್ಯದ್ಯಂತ ವಿಚಾರ ಸಂಕಿರಣ ನಡೆಸಲು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿರ್ಧರಿಸಿದೆ. ಅಧಿವೇಶನದಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next