ಶಹಾಪುರ: ಕೃಷಿ ವಿಶ್ವವಿದ್ಯಾಲಯ ಕಾಯ್ದೆ ತಿದ್ದುಪಡೆ ಮತ್ತು ನೂತನವಾಗಿ ಖಾಸಗಿ ಕೃಷಿ ಕಾಲೇಜು ಆರಂಭಕ್ಕೆ ಮನ್ನಣೆ ನೀಡಿರುವುದನ್ನು ಖಂಡಿಸಿ, ಖಾಸಗಿ ಕೃಷಿ ಕಾಲೇಜುಗಳಿಗೆ ಅಫಿಲೇಷನ್ ನೀಡಕೂಡದು ಎಂದು ಆಗ್ರಹಿಸಿ ಭೀಮರಾಯನ ಗುಡಿ ಕೃಷಿ ಮಹಾವಿದ್ಯಾಲಯ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
2010ರಲ್ಲಿ ಕೃಷಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ಮಾಡಿ ಮೊದಲ ಬಾರಿಗೆ ಖಾಸಗಿ ಕೃಷಿ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಖಾಸಗಿ ಕೃಷಿ ಕಾಲೇಜುಗಳಿಂದ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಯ
ವಿಭಾಗದಲ್ಲಿ ಹಲವಾರು ನ್ಯೂನತೆಗಳು ಹೊಂದಿದ್ದು, ಗುಣಮಟ್ಟದ ಶಿಕ್ಷಣ ನೀಡದೆ ವಿದ್ಯಾರ್ಥಿಗಳ ಬಾಳು ಹಾಳುಗೆಡವುತ್ತಿವೆ. ಅಲ್ಲದೆ ಹಣ ವಸೂಲಿ ಶಿಕ್ಷಣ ಕೇಂದ್ರಗಳಾಗುತ್ತಿವೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಕ್ರೋಶವ್ಯಕ್ತಪಡಿಸಿದರು.
ಕೂಡಲೇ ಖಾಸಗಿ ಕೃಷಿ ಕಾಲೇಜುಗಳಿಗೆ ಸರ್ಕಾರ ಮಾನ್ಯತೆ ನೀಡಬಾರದು. ಮತ್ತು ಸರ್ಕಾರಿ ಕೃಷಿ ಸ್ನಾತಕ್ಕೋತ್ತರ ಪದವಿ ಶಿಕ್ಷಣಕ್ಕೆ ರೈ ಟೆಕ್ನಾಲಜಿಯ ವಿಶ್ವವಿದ್ಯಾಲಯದ ಸ್ನಾತಕ ಪದವಿಗಳನ್ನು ನಿರ್ಬಂಧಿಸಬೇಕು. ಅಲ್ಲದೆ ನಿರುದ್ಯೋಗ ಮತ್ತು ಶಿಕ್ಷಣದ ಗುಣಮಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರಂಭವಾಗಿರುವಖಾಸಗಿ ಕೃಷಿ ಕಾಲೇಜುಗಳಿಗೆ ಸರ್ಕಾರ ಮಾನ್ಯತೆ ನೀಡಬಾರದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಭೀ. ಗುಡಿ ಕೃಷಿ ಮಹಾವಿದ್ಯಾಲಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ
ಭಾಗವಹಿಸಿದ್ದರು. ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಅವರಿಗೆ ವಿದ್ಯಾರ್ಥಿಗಳು ಮನವಿಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ರೈ ಟೆಕ್ನಾಲಜಿ ವಿರೋಧಿ ಸಿ ವಿದ್ಯಾರ್ಥಿಗಳು ರೈ ಟೆಕ್ನಾಲಜಿಯ ಮಾನವಭೂತ ತಯಾರಿಸಿ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.