Advertisement

ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸಲು ಆಗ್ರಹ

11:01 AM Mar 17, 2019 | |

ಬೀದರ: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ಅಂಗನವಾಡಿ ಸಿಬ್ಬಂದಿಗೆ ಐದು ತಿಂಗಳಿಂದ ಗೌರವ ಧನ ಪಾವತಿಯಾಗಿಲ್ಲ. ಕೂಡಲೆ ಗೌರವ ಧನ ನೀಡಬೇಕು. ಗುಣಮಟ್ಟದ ಆಹಾರ ಪದಾರ್ಥ, ಸಾಮಗ್ರಿಗಳನ್ನು ಸರಿಯಾದ ಸಮಯಕ್ಕೆ ಸರಬರಾಜು ಮಾಡಬೇಕು. ಅಂಗನವಾಡಿ ಕೇಂದ್ರಗಳ ಬಾಡಿಗೆ ಕಳೆದ ವರ್ಷ ಏಪ್ರಿಲ್‌ ತಿಂಗಳಿಂದ ಬಾಕಿ ಇದ್ದು, ಕೂಡಲೆ ಬಾಡಿಗೆ ಪಾವತಿ ಮಾಡಬೇಕು. ಅಂಗನವಾಡಿ ಸಿಬ್ಬಂದಿಗೆ ಇತರೆ ಇಲಾಖೆಗಳ ಕೆಲಸ ನೀಡಬಾರದು. 

ನಿವೃತ್ತರಾದ ಕಾರ್ಯಕರ್ತೆಯರಿಗೆ ಕೂಡಲೆ ಹಣ ಬಿಡುಗಡೆ ಮಾಡಬೇಕು. ಅಮಾನತುಗೊಳಿಸಿದ ಕಾರ್ಯಕರ್ತೆಯರನ್ನು ಮರಳಿ ಕೆಲಸಕ್ಕೆ ನೇಮಿಸಿಕೊಳ್ಳಬೇಕು. ಮಾತೃಪೂರ್ಣ ಯೋಜನೆಯಡಿ ಅಡುಗೆ ಪಾತ್ರೆಗಳು, ಪೂರ್ಣ ಪ್ರಮಾಣದ ಆಹಾರ, ತರಕಾರಿ ಮತ್ತು ಇತರೆ ಸಾಮಗ್ರಿಗಳನ್ನು ಮುಂಗಡವಾಗಿ ಕೂಡಬೇಕು. ವರ್ಷಕ್ಕೆ 8 ಸಿಲಿಂಡರ್‌ ನೀಡಬೇಕು ಎಂಬ ನಿಯಮ ಇದ್ದರೂ ಸಿಲಿಂಡರ್‌ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next