.ಡಿಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ಹಾಗೂ ಅವರ ಮೇಲೆ ಹಲ್ಲೆ ಪ್ರಕರಣದಲ್ಲಿ ಪಿ.ಎಫ್.ಐ ಹಾಗೂ ಕೆ.ಎಫ್.ಡಿ ಸಂಘಟನೆಗಳು ನೇರವಾಗಿ ಭಾಗಿಯಾಗಿರುವುದು ರುಜುವಾತಾಗಿದೆ. ಆದ್ದರಿಂದ ಕೂಡಲೇ ಈ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.
ಈ ಸಂಘಟನೆಗಳ ಬ್ಯಾಂಕ್ ಖಾತೆ ಹಾಗೂ ಚರಾಸ್ತಿ ಮತ್ತು ಸ್ಥಿರಾಸ್ತಿಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಬೇಕು. 2008ರ ರಾಷ್ಟ್ರೀಯ ತನಿಖಾ ದಳ ಕಾಯ್ದೆ ಸೆಕ್ಷನ್ 6ರ ರನ್ವಯ ರಾಜ್ಯದಲ್ಲಿ ಹಿಂದುಗಳ ಮೇಲಾಗಿರುವ ಎಲ್ಲ ಹತ್ಯೆ ಮತ್ತು ಹಲ್ಲೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಬೇಕು ಆಗ್ರಹಿಸಿದರು. ದೇಶದ್ರೋಹಿ ಸಂಘಟನೆಗಳಿಗೆ ಮತ್ತು ಕೋಮು ಹಿಂಸೆಗೆ ಕುಮ್ಮಕ್ಕು ನೀಡುತ್ತಿರುವ ಸಚಿವ ರಮಾನಾಥ ರೈ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಕಾಂತ ಎಸ್. ಸುಬೇದಾರ್, ಹಣಮಂತ ಇಟಗಿ, ಬಸವರಾಜ ಗೊಂದೆನೂರ, ಭೀಮರೆಡ್ಡಿ ಕುರುಕುಂದಿ, ನಾಗರಾಜ ಪಾಟೀಲ ಮಳಳ್ಳಿ, ಶಿವರಾಜ ದಾಸನಕೇರಿ ಅಮರೇಶಗೌಡ ಕುರುಕುಂದಿ, ಮಲ್ಲಿಕಾರ್ಜುನ ದೋರಿ, ಹಣಮಂತ ಬೆಳಗೇರಿ, ದೇವ ರಾಜ ಸಾಲಿಕೇರಿ ಇದ್ದರು.
Advertisement