Advertisement

ಗುತ್ತಿಗೆದಾರ ಆತ್ಯಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ

02:33 PM Apr 19, 2022 | Team Udayavani |

ರಾಯಚೂರು: ಗುತ್ತಿಗೆದಾರ ಸಂತೋಷ ಪಾಟೀಲ್‌ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು, ಘಟನೆಗೆ ಕಾರಣರಾದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ) ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ಈ ಕುರಿತು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು. ಬೆಳಗಾವಿ ಹಿಂಡಲಗ ಗ್ರಾಮದ ಗುತ್ತಿಗೆದಾರ ಸಂತೋಷ ಪಾಟೀಲ್‌ ಉಡುಪಿ ಲಾಡ್ಜ್ನಲ್ಲಿ ಸಾವಿಗೆ ಶರಣಾಗಿದ್ದಾರೆ. ಸಚಿವ ಕೆ.ಎಸ್‌. ಈಶ್ವರಪ್ಪನವರೇ ನನ್ನ ಸಾವಿಗೆ ಕಾರಣ ಎಂದು ವಾಟ್ಸ್‌ಆ್ಯಪ್‌ ಸಂದೇಶದಲ್ಲಿ ತಿಳಿಸಿದ್ದಾರೆ. ಸುಮಾರು 4 ಕೋಟಿ ರೂ. ವೆಚ್ಚದ 108 ಕಾಮಗಾರಿಗಳನ್ನು ನಿರ್ವಹಿಸಿದ್ದು, ಹಣ ಬಿಡುಗಡೆ ಮಾಡಲು ಶೇ.40ರಷ್ಟು ಕಮಿಷನ್‌ ಹಣ ನೀಡುವಂತೆ ಕೆ.ಎಸ್‌. ಈಶ್ವರಪ್ಪ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾರೆ ಎಂದು ದೂರಿದರು.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಸಂತೋಷ ಪಾಟೀಲ್‌ ಅವರ ಕುಟುಂಬಕ್ಕೆ ಎರಡು ಕೋಟಿ ರೂ. ಪರಿಹಾರ ನೀಡಬೇಕು. ಕುಟುಂಬದ ಸದಸ್ಯರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಸಂತೋಷ ಪಾಟೀಲ್‌ ನಿರ್ವಹಿಸಿದ ಕಾಮಗಾರಿಗಳನ್ನು ಪರಿಶೀಲಿಸಿ ಕಾಮಗಾರಿಯ ಹಣವನ್ನು ಅವರ ಪತ್ನಿಗೆ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಏಗನೂರು, ಸದಸ್ಯರಾದ ನರಸಿಂಹಲು, ಪ್ರಕಾಶ ಕುಮಾರ, ರಂಜಿತ್‌ ದಂಡೋರ, ಆಂಜನೇಯ, ರವಿಕುಮಾರ, ಸುರೇಶ, ಪರಮೇಶ ಸೇರಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next