Advertisement
ನಿಗಮ ಹೊರತಂದಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಪರೂಪದ ಛಾಯಾಚಿತ್ರಗಳಿರುವ ಕ್ಯಾಲೆಂಡರ್‌ಅನ್ನು ನಗರದಲ್ಲಿ ಗುರುವಾರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪಂಗಡದವರ ಆರ್ಥಿಕ ಬಲವರ್ಧನೆಗೆ ನಾನಾ ಕಾರ್ಯಕ್ರಮಗಳನ್ನು ನಿಗಮದಿಂದ ಕೈಗೊಳ್ಳಲಾಗಿದೆ. ಜತೆಗೆ ಫಲಾನುಭವಿಗಳಿಗೆ ತ್ವರಿತವಾಗಿ ತಲುಪಿಸಲು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
Related Articles
Advertisement
ಅನುದಾನ ಹೆಚ್ಚಳ: 2012-13ನೇ ಸಾಲಿನಲ್ಲಿ ನಿಗಮಕ್ಕೆ ವಾರ್ಷಿಕ 100ರಿಂದ 150 ಕೋಟಿ ರೂ. ಅನುದಾನವಿತ್ತು. ಎಸ್‌ಸಿಪಿಟಿಎಸ್‌ಪಿ ಕಾಯ್ದೆ ಜಾರಿಯಾದ ಬಳಿಕ ಅನುದಾನ ಹೆಚ್ಚಾಗಿದ್ದು, 1,200 ಕೋಟಿ ರೂ.ವರೆಗೆ ಏರಿಕೆಯಾಗಿದೆ. ಇದರಿಂದ ಫಲಾನುಭವಿಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸುಲು, ಪರಿಶಿಷ್ಟ ಜಾತಿ, ಪಂಗಡದ ಆರ್ಥಿಕವಾಗಿ ಹಿಂದುಳಿದವರ ಬಲವರ್ಧನೆಗೆ ಒತ್ತು ನೀಡಲಾಗಿದೆ. ಭೂಒಡೆತನ ಯೋಜನೆಯಲ್ಲಿ ಶೇ.54ರಷ್ಟು ಪ್ರಗತಿ ಸಾಧಿಸಲಾಗಿದೆ. ಭೂಒಡೆತನ ಯೋಜನೆಯಡಿ 2016-17ರಲ್ಲಿ 1040 ಫಲಾನುಭವಿಗಳು ಸೌಲಭ್ಯ ಪಡೆದಿದ್ದರೆ ಪ್ರಸಕ್ತ ವರ್ಷದಲ್ಲಿ ಈವರೆಗೆ 1,200 ಮಂದಿ ಸೌಲಭ್ಯ ಪಡೆದಿದ್ದಾರೆ.
ಹಾಗೆಯೇ 2016-17ರಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿ 10,595 ಮಂದಿ ಹಾಗೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗೆ 5944 ಮಂದಿ ಪ್ರಯೋಜನ ಪಡೆದಿದ್ದಾರೆ. ಪ್ರಸಕ್ತ ವರ್ಷದಲ್ಲಿ 16,189 ಮಂದಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ದೇಶದಲ್ಲೇ ಪ್ರಥಮ ಬಾರಿಗೆ ಕಲ್ಯಾಣ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು, ಇದರಲ್ಲಿ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೆಆರ್‌ಐಇಎಸ್, ಲಿಡ್ಕರ್, ಪಿಇಟಿಸಿ, ಕೆಎಂವಿಎಸ್‌ಟಿಡಿಸಿ ಸೇರಿದಂತೆ ಇನ್ನಿತರ ಯೋಜನೆಗಳ ಸಮಗ್ರ ಮಾಹಿತಿ ಒಂದೇ ಆ್ಯಪ್‌ನಲ್ಲಿ ಸಿಗಲಿದೆ.
ಜತೆಗೆ ಕೆಲವೊಂದು ಮೂಲ ಮಾಹಿತಿ ದಾಖಲಿಸಿದರೆ ಅವರಿಗೆ ನಿರ್ದಿಷ್ಟವಾಗಿ ಅನ್ವಯಿಸುವ ಸೌಲಭ್ಯಗಳ ವಿವರವೂ ಸಿಗಲಿದೆ. ಒಟ್ಟಾರೆ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುತ್ತಿದೆ ಎಂದು ಹೆಳಿದರು.