Advertisement

Minister Priyank Kharge ವಜಾ ಆಗ್ರಹ, ರಾಜ್ಯಪಾಲರಿಗೆ ದೂರು

12:38 AM Aug 28, 2024 | Team Udayavani |

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ 5 ಎಕರೆ ಜಾಗ ಪಡೆದುಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಈಗ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

Advertisement

ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್‌ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೂರು ನೀಡಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಛಲವಾದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ 5 ಎಕರೆ ಜಾಗ ಪಡೆದಿದ್ದಾರೆ. ಸಚಿವರಾಗಿ ಪ್ರಿಯಾಂಕ್‌ ಖರ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ.

ಕೈಗಾರಿಕಾ ನಿವೇಶನ ಪಡೆಯುವ ಹಕ್ಕು ಎಲ್ಲರಿಗೂ ಇದೆ. ಆದರೆ ಸಿಎ ಸೈಟ್‌ ಪಡೆಯಲು ಕೆಲವು ಕಾನೂನುಗಳಿವೆ. ಇತರ ಅರ್ಜಿಗಳನ್ನು ತಿರಸ್ಕರಿಸಿ ಪ್ರಬಲರಿಗೆ ಕೊಡಲಾಗಿದೆ. ಇಲ್ಲಿ ಸ್ವಜನ ಪಕ್ಷಪಾತ ನಡೆದಿದೆ ಎಂಬ ಅನುಮಾನ ಸೃಷ್ಟಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next