Advertisement

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ

03:40 PM Oct 17, 2017 | |

ಸುರಪುರ: ವಿವಿಧ ಬೆಡಿಕೆಗಳ ಈಡೇರಿಕೆಗೆ ಒತ್ತಾಯಸಿ ಜೆಡಿಎಸ್‌ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು. ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್‌ ಹುಸೇನ ಮಾತನಾಡಿ, ಕಳೆದ ಎರಡು ತಿಂಗಳಿಂದ ವಾಡಿಕೆಗಿಂತ ಹೆಚ್ಚು ಮಳೆ ಸುರಿದು ರೈತರು ಬಿತ್ತಿದ ಬೆಳೆಗಳು ಹಾಳಾಗಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

Advertisement

ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಇದುವರೆಗೂ ಬೆಳೆ ನಷ್ಟ ಸಮೀಕ್ಷೆ ಮಾಡಿಲ್ಲ ಎಂದು ಆರೋಪಿಸಿದರು. ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ನಷ್ಟದಲ್ಲಿದ್ದಾರೆ. ಆದರೆ ಬ್ಯಾಂಕ್‌ ಅಧಿಕಾರಿಗಳು ಸಮರ್ಪಕವಾಗಿ ಸಾಲ ಸೌಲಭ್ಯ ನೀಡದೆ ಸಾಲ ಮರುಪಾವತಿಗೆ ಒತ್ತಾಯಿಸುತ್ತಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತ್ತಾಗುತ್ತಿದೆ ಎಂದು ದೂರಿದರು.

ಮುಖಂಡ ವೆಂಕೋಬ ದೊರೆ ಮಾತನಾಡಿ, ಕೃಷಿ ಇಲಾಖೆಯಿಂದ ಸರಕಾರದ ಯೋಜನೆಗಳು ಸಮರ್ಪಕವಾಗಿ
ಅನುಷ್ಠಾನಗೊಳ್ಳುತ್ತಿಲ್ಲ. ಈ ಬಗ್ಗೆ ಕೃಷಿ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಬೀಜ ಗೊಬ್ಬರ, ಕ್ರಿಮಿನಾಶಕ ಸಿಂಪಡಣೆ ಯಂತ್ರಗಳು ಸಕಾಲಕ್ಕೆ ವಿತರಿಸುತ್ತಿಲ್ಲ. ಕೃಷಿ ಹೊಂಡ ನಿರ್ಮಾಣದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಇದರ ಬಗ್ಗೆ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಾಲ ವಸೂಲಾತಿ ನಿಲ್ಲಿಸಿ ಮರು ಸಾಲ ನೀಡುವಂತೆ ಬ್ಯಾಂಕ್‌ ಅಧಿಕಾರಿಗಳಿಗೆ ಆದೇಶಿಸಬೇಕು. ವಜ್ಜಲ್‌ ಗ್ರಾಪಂ ಪಿಡಿಒ ಅವರ ವರ್ಗಾವಣೆ ರದ್ದುಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳ ಮನವಿ ಪತ್ರವನ್ನು ಶಿರಸ್ತೇದಾರ ನಿಸ್ಸಾರ ಅಹ್ಮದ್‌ ಅವರಿಗೆ ಸಲ್ಲಿಸಿದರು. ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಯಮನಪ್ಪ ದೊರೆ, ಕಾರ್ಯದರ್ಶಿ ವೆಂಕಟೇಶ ಭಕ್ರಿ, ದಾವಲಸಾಬ ಗೋಡಿಹಾಳ,
ಶೌಕತಲಿ, ಶ್ರೀನಿವಾಸ ನಾಯಕ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next