Advertisement

ವಿವಿಗಳಿಗೆ ನಿಧಿ ಸಂಗ್ರಹ ಸ್ವಾತಂತ ನೀಡಲು ಆಗ್ರಹ

06:15 AM Jan 17, 2018 | Team Udayavani |

ನವದೆಹಲಿ: ವಿಶ್ವವಿದ್ಯಾಲಯಗಳು ಇತರ ಮಾದರಿಯಲ್ಲಿ ನಿಧಿ ಸಂಗ್ರಹಿಸಲು ಕೇಂದ್ರ ಅನುವು ಮಾಡಿಕೊಡಬೇಕು. ಜತೆಗೆ ಉನ್ನತ ಶಿಕ್ಷಣದಲ್ಲಿ ಲಾಭದ ಉದ್ದೇಶವಿಲ್ಲದ ಕಂಪನಿಗಳ ಮೂಲಕ ಹಣ ಸಂಗ್ರಹಿಸಲು ಅನುಮತಿ ನೀಡಬೇಕು ಎಂದು ಕರ್ನಾಟಕ ಸರ್ಕಾರ ಒತ್ತಾಯಿಸಿದೆ. ನವದೆಹಲಿಯಲ್ಲಿ ಮಂಗಳವಾರ ಮುಕ್ತಾಯವಾದ ಶಿಕ್ಷಣಕ್ಕಾಗಿ ಕೇಂದ್ರ ಸಲಹಾ ಮಂಡಳಿ (ಸಿಎಬಿಇ)ಸಭೆಯಲ್ಲಿ ಕರ್ನಾಟಕದ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಈ ಒತ್ತಾಯ ಮಾಡಿದ್ದಾರೆ. ಜತೆಗೆ ದೇಶದ ಪ್ರತಿ ರಾಜ್ಯದಲ್ಲಿಯೂ ಕೌಶಲ ವಿಶ್ವವಿದ್ಯಾನಿಲಯ (ಸ್ಕಿಲ್‌ ಯುನಿವರ್ಸಿಟಿ) ಆರಂಭಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.

Advertisement

ಉನ್ನತ ಶಿಕ್ಷಣಕ್ಕೆ ನೀಡುತ್ತಿರುವ ಹಣಕಾಸಿನ ನೆರವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಬೇಕು. ವಿವಿಗಳಿಗೆ ಹಾಲಿ ಇರುವ ಹಣಕಾಸಿನ ಸ್ವಾತಂತ್ರ್ಯದ ಮಿತಿಯನ್ನು ಹೆಚ್ಚಿಸಬೇಕು ಎಂಬ ಅಂಶವನ್ನು ರಾಯರೆಡ್ಡಿ ಪ್ರತಿಪಾದಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೆರವು ನೀಡುವ ವಿವಿಗಳ ನಡುವೆ ಯಾವುದೇ ರೀತಿಯಲ್ಲಿ ತಾರತಮ್ಯ ಉಂಟಾಗಬಾರದು ಎಂದು ಸಲಹೆ ನೀಡಿದ್ದಾರೆ. 

ಆನ್‌ಲೈನ್‌ ಕೋರ್ಸ್‌ಗಳು: ಈ ನಡುವೆ ಮತ್ತೂಂದು ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್‌)ಯಿಂದ ಎ ಪ್ಲಸ್‌ ಮತ್ತು ಎ ಪ್ಲಸ್‌ ಪ್ಲಸ್‌ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳು ಮೂರು ವರ್ಷಗಳ ಪದವಿ ಶಿಕ್ಷಣವನ್ನು ಆನ್‌ಲೈನ್‌ನಲ್ಲಿ ನೀಡಲಿವೆ. ಅವುಗಳನ್ನು ಇತರ ಸಾಮಾನ್ಯ ಪದವಿಯಂತೆಯೇ ಪರಿಗಣಿಸಲಾಗುತ್ತದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಬಗ್ಗೆ ನಿಯಮಗಳನ್ನು ಸಿದ್ಧಪಡಿಸುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next