ಜಾರಿಗಾಗಿ ಕೇಂದ್ರ ಸರಕಾರಕ್ಕೆ ಶಿಪಾರಸು ಮಾಡುವಂತೆ ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
Advertisement
ನಗರದ ಮೈಲಾಪುರ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು ರಾಜ್ಯ ಸರಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮಿತಿ ರಾಜ್ಯ ಉಪಾಧ್ಯಕ್ಷ ದೇವಿಂದ್ರನಾಥ ಕೆ. ನಾದ್ ಮಾತನಾಡಿ, ಕಳೆದ ಎರಡು ದಶಕಗಳಿಂದ ಒಳ ಮೀಸಲಾತಿ ಜಾರಿಗಾಗಿ ಹೋರಾಟ ನಡೆಸಲಾಗುತ್ತಿದೆ. ಇಲ್ಲಿಯವರೆಗೆ ನ್ಯಾ| ಎ.ಜೆ. ಸದಾಶಿವ ಆಯೋಗ ವರದಿ ಜಾರಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವರದಿ ಸಲ್ಲಿಸಿದ ನಂತರ ವಿರೋಧ ಮಾಡುತ್ತಿರುವುದು ಸಂವಿಧಾನಕ್ಕೆ ವಿರೋಧ ಮಾಡಿದಂತಾಗಿದೆ. ಒಳ ಮೀಸಲಾತಿ ಜಾರಿಗೆ ಸಂವಿಧಾನದಲ್ಲಿರುವ ಕಾನೂನುಗಳ ತಿಳಿದುಕೊಳ್ಳದೆ, ಬೇಕಾಬಿಟ್ಟಿ ಹೇಳಿಕೆ ನೀಡಿ ರಾಜ್ಯದ ಜನತೆಗೆ ತಪ್ಪು ಸಂದೇಶ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಸಮಿತಿ ಜಿಲ್ಲಾಧ್ಯಕ್ಷ ಲಿಂಗಪ್ಪ ಹತ್ತಿಮನಿ, ಎಂ.ಕೆ ಬಿರನೂರ, ನಿಂಗಪ್ಪ ವಡ್ಡನಳ್ಳಿ, ಚೆನ್ನಯ್ಯ ಮಾಳಿಕೇರಿ, ಹಣಮಂತ ಲಿಂಗೇರಿ, ಭೀಮಾಶಂಕರ ಬಿಲ್ಲವ. ನಂದಕುಮಾರ ಬಾಂಬೆಕರ್, ಜಿಪಂ ಸದಸ್ಯ ಶಿವಲಿಂಗಪ್ಪ ಪುಟಗಿ ಮಾತನಾಡಿದರು.
Related Articles
Advertisement
ಶೀಘ್ರ ವರದಿ ಜಾರಿಗೊಳಿಸಿ ಲಂಬಾಣಿ ಬೋವಿ ಇತರೆ ಜಾತಿಗಳನ್ನು ಪರಿಶಿಷ್ಟ ಜಾತಿಯಲ್ಲಿ ಸೇರಿಸಬೇಕೆಂದು ಹಾವನೂರ ಆಯೋಗ ಸರಕಾರಕ್ಕೆ ವರದಿ ಸಲ್ಲಿಸಿದಾಗ ಮಾದಿಗ ಮತ್ತು ಛಲವಾದಿ ಸಮುದಾಯದ ಮುಖಂಡರು ವಿರೋಧ ವ್ಯಕ್ತಪಡಿಸಿಲ್ಲ. ಸರಕಾರದ ಯೋಜನೆಗಳನ್ನು ಬಹುಪಾಲು ಸ್ಪರ್ಶ ಜನಾಂಗದ ದಲಿತರು ಲಾಭ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಮೂಲ ದಲಿತರಿಗೆ ಅನ್ಯಾಯ ಆಗುತ್ತಿದ್ದು, ಕೂಡಲೇ ನ್ಯಾ| ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಮಾಡಬೇಕು.ಶಾಂತರಾಜ ಮೋಟನಳ್ಳಿ, ಮುಖಂಡ