Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಈ ಹಿಂದೆ ಹೊಂದಾಣಿಕೆ ಮಾಡಿಕೊಂಡಿದ್ದವು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಚುನಾವಣಾ ಹೊಂದಾಣಿಕೆ ಏನೆಂಬುದು ಜನರಿಗೆ ತಿಳಿದಿದೆ. ಪಿಎಫ್ಐ, ಕೆಎಫ್ಡಿ ಮತ್ತು ಎಸ್ ಡಿಪಿಐ ಕಾಂಗ್ರೆಸ್ಸಿನ ಇನ್ನೊಂದು ಮುಖ ಎಂದು ಆರೋಪಿಸಿದರು.
Related Articles
Advertisement
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ರಾಜ್ಯ ಬಿಜೆಪಿ ಎಸ್. ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಪಿಎಫ್ಐಯ ರಾಜಕೀಯ ಮುಖವಾಡ ಮತ್ತು ರಾಜಕೀಯ ಮುಖವಾಣಿ ಎಸ್ ಡಿ ಪಿ ಐ. ಈ ಹಿಂದೆ ರಾಜ್ಯದಲ್ಲಿ ಅವರು ಕೆಎಫ್ಡಿ ಹೆಸರಿನಲ್ಲಿ ಕೆಲಸ ಮಾಡುತ್ತಿದ್ದರು. ಹಲವಾರು ಜನರನ್ನು ಬಂಧಿಸಲಾಗಿತ್ತು. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಸುಮಾರು 116 ಕೇಸುಗಳಲ್ಲಿ ಸಿಕ್ಕಿ ಬಿದ್ದಿದ್ದ 1700 ಪಿ ಎಫ್ ಐ ಮತ್ತು ಕೆಎಫ್ ಡಿ ಮುಖಂಡರು ಮತ್ತು ಕಾರ್ಯಕರ್ತರನ್ನು ಬಿಡುಗಡೆ ಮಾಡಿತ್ತು. ಹಾಗೆ ಬಿಡುಗಡೆಯಾದವರೇ ಸಮಾಜದಲ್ಲಿ ಗೊಂದಲದ ವಾತಾವರಣವನ್ನು ನಿರ್ಮಾಣ ಮಾಡಿದರು. ಕೆಜೆ ಹಳ್ಳಿ ಡಿಜೆ ಹಳ್ಳಿ, ಮಂಗಳೂರಿನ ಸ್ಟೇಷನ್ನಿಗೆ ನುಗ್ಗಿರುವುದು, ಹುಬ್ಬಳ್ಳಿಯಲ್ಲಿ ಪೆಲೀಸ್ ಠಾಣೆ ಮೇಲೆ ದಾಳಿ ಮಾಡಿರುವುದು ಪಿಎಫ್ ಐ ಕಾರ್ಯಕರ್ತರೇ ಆಗಿದ್ದಾರೆ ಎಂದು ದೂರಿದರು.
ಕಳೆದ ಬಾರಿ ನಾವು 25 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದ್ದೆವು. ಆದರೆ ಕಾಂಗ್ರೆಸ್ಸಿನ ನೇತಾರರ- ನಾಯಕರ ಕೋರಿಕೆ ಮೇರೆಗೆ ಅವರೆಲ್ಲರನ್ನು ಕಣಕ್ಕಿಳಿಸದೆ ಮೂರು ಜನರನ್ನು ಮಾತ್ರ ಕಣಕ್ಕಿಳಿಸಿದೆವು’ ಎಂದು ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಪಿಎಫ್ ಐ -ಎಸ್ ಡಿ ಪಿ ಐಗೆ ಸಹಾಯ ಮಾಡಿದ್ದಕ್ಕಾಗಿ ಎಸ್‌ಡಿಪಿಐ ಹೊಂದಾಣಿಕೆ ರಾಜಕೀಯ ಮಾಡಿಕೊಂಡಿದೆ ಎಂಬುದು ಇದರಿಂದ ದೃಢಪಟ್ಟಿದೆ ಎಂದು ಆರೋಪಿಸಿದರು.