Advertisement

ದಾಳಿಂಬೆ ಬೆಳೆಗಾರರ ಸಾಲಮನ್ನಾಕ್ಕೆ ಆಗ್ರಹ

12:20 PM Aug 08, 2018 | Team Udayavani |

ಬೆಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವ ದಾಳಿಂಬೆ ಬೆಳಗಾರರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ, ಅಖೀಲ ಕರ್ನಾಟಕ ದಾಳಿಂಬೆ ಬೆಳೆಗಾರರ ಹೋರಾಟ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

Advertisement

ಸಮಿತಿಯ ರಾಜ್ಯಾಧ್ಯಕ್ಷ ಅಬ್ದುಲ್‌ ನಯೀಂ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತೊಂದರೆಗೆ ಸಿಲುಕಿರುವ ದಾಳಿಂಬೆ ಬೆಳೆಗಾರರ ನೆರವಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್‌ ನಯೀಂ, 2003-04ರ ಅವಧಿಯಲ್ಲಿ ದಾಳಿಂಬೆ ಬೆಳೆಗಾರರು ವಿವಿಧ ಬ್ಯಾಂಕ್‌ಗಳಲ್ಲಿ ಸಾಲಮಾಡಿದ್ದರು. ಆದರೆ, 2008-9ರ ಹೊತ್ತಿಗೆ ಅಂಗಮಾರಿ ರೋಗ ಬೆಳೆಗೆ ತುಗುಲಿ ಸಂಪೂರ್ಣ ನಾಶವಾಯಿತು. ಹೀಗಾಗಿ, ದಾಳಿಂಬೆ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡಲೇ ಬೆಳೆಗಾರರ ರಕ್ಷಣೆಗೆ ಬರಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ತೋಟಗಾರಿಕೆ ಇಲಾಖೆ ದಾಳಿಂಬೆ ಬೆಳೆ ನಾಶದ ಬಗ್ಗೆ ಸಮಗ್ರ ವದರಿಯನ್ನು ತಯಾರಿಸಿ ಕೇಂದ್ರಕ್ಕೆ ಸಲ್ಲಿಸಿತ್ತು. ಬೆಳೆಗಾರರ ಸಾಲ ಮನ್ನಾಕ್ಕೂ ಶಿಫಾರಸು ಮಾಡಿತ್ತು. ಆದರೆ ಇಲ್ಲಿಯ ವರೆಗೂ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿಲ್ಲ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next