Advertisement

ಡಿ.23 ರಿಂದ ಪಂಚಮಸಾಲಿ ಮೀಸಲಾತಿಗಾಗಿ ಪಾದಯಾತ್ರೆ‌, ವಿಧಾನಸೌಧ ಮುತ್ತಿಗೆ

01:00 PM Dec 06, 2020 | keerthan |

ವಿಜಯಪುರ: ಪಂಚಮಸಾಲಿ ಸಮಾಜಕ್ಕೆ ರಾಜ್ಯದಲ್ಲಿ 2A ಹಾಗೂ ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಡಿ.23 ರಂದು ಬೆಂಗಳೂರು ವಿಧಾನಸೌಧ‌ ಮುತ್ತಿಗೆ ಹಾಕಲು ಕೂಡಲಸಂಗಮದಿಂದ ಪಾದಯಾತ್ರೆ ಆರಂಭ ಮಾಡುವುದಾಗಿ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು.

Advertisement

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಇರುವ ಮೀಸಲಾತಿ ಪಡೆಯಲೆಂದೇ ಸಮಾಜ ಸಂಘಟನೆ ಮಾಡಲಾಗುತ್ತದೆ ಎಂದರು.

ಬೆಳಗಾವಿ ಸುವರ್ಣ ಸೌಧ ಎದುರು ಉಪವಾಸ ಸತ್ಯಾಗ್ರಹದ ಹೋರಾಟ ನಡೆಸಲಾಗಿತ್ತು ಸಿ.ಎಂ. ಕರೆಯ ಮೇರೆಗೆ ಹೋರಾಟ ಹಿಂಪಡೆದು, ಸರ್ಕಾರಕ್ಕೆ ನೀಡಿದ ನವೆಂಬರ್ 28 ಗಡುವು ಮೀರಿದೆ. ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆ ಹುಸಿಯಾಗಿದೆ. ಹೀಗಾಗಿ ಡಿ.23 ರಿಂದ ಕೂಡಲಸಂಗಮ ದಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಂಚ ಲಕ್ಷ ಹೆಜ್ಜೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಹೇಳಿದರು.

ಸದರಿ ಪಂಚ ಲಕ್ಷ ಪಾದಯಾತ್ರೆಗೆ ಪ್ರತಿ ಜಿಲ್ಲೆಯಿಂದ 10 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆ ನಿತ್ಯ ಪ್ರತಿ 20 ಕಿ.ಮೀ. ಪಾದಯಾತ್ರೆ ನಡೆಯಲಿದೆ ಎಂದರು.

ಇದನ್ನೂ ಓದಿ:ನಾಳೆಯಿಂದ ವಿಧಾನಮಂಡಲ ಅಧಿವೇಶನ: ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ಸಭೆ

Advertisement

ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಸವೇಶ್ವರ ಹೆಸರು ನಾಮಕರಣ ಮಾಡಲು ಕೋರಲಾಗಿದೆ. ಯಡಿಯೂರಪ್ಪ ಎರಡು ಬಾರಿ ಸಿ.ಎಂ. ಮಾಡಲು ಸಮಾಜದ ಋಣ ದೊಡ್ಡದಿದೆ. ಕಾರಣ ಯಡಿಯೂರಪ್ಪ ಸರ್ಕಾರ ನಮ್ಮ ಸಮಾಜದ ಹಕ್ಕೊತ್ತಾಯಕ್ಕೆ ಸ್ಪಂದಿಸುವ ವಿಶ್ವಾಸ ಇದೆ ಎಂದರು.

ಸದರಿ ಪಾದಯಾತ್ರೆಯಲ್ಲಿ ವಿವಿಧ ಮಠಗಳ ಮಠಾಧೀಶರು ಸಮುದಾಯದ ಎಲ್ಲ ಶಾಸಕರು ಪಾಲ್ಗೊಳ್ಳಲಿದ್ದಾರೆ. ಸದರಿ ಪಾದಯಾತ್ರೆ ಪೂರ್ವಸಿದ್ಧತೆಗಾಗಿ ಶಾಸಕರ ಸಭೆ ಕರೆದಿದ್ದು, ಹೋರಾಟದ ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದರು.

ಬಿ.ಎಂ.ಪಾಟೀಲ, ಶಂಕರಗೌಡ ಬಿರಾದಾರ, ಮಲ್ಲನಗೌಡ ಬಿರಾದಾರ, ವಕ್ತಾರ ಸಂಗಮೇಶ ಬಬಲೇಶ್ವರ, ಸಿ.ಎಸ್.ಸೊಲ್ಲಾಪುರ,  ಮಹಿಳಾ ಜಿಲ್ಲಾಧ್ಯಕ್ಷೆ ಲತಾ ಜಿರಾದಾರ, ಶ್ರೀಶೈಲ ಬುಕ್ಕಾಣಿ, ದಾನೇಶ ಅವಟಿ, ಶೋಭಾ ಎಸ್. ಬಿರಾದಾರ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next