Advertisement

ಪಿಂಚಣಿಗೆ ಆಗ್ರಹಿಸಿ ಧರಣಿ

11:23 AM Jan 19, 2018 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಪಿಂಚಣಿ ಯೋಜನೆ ವಿರೋಧಿಸಿ ರಾಜ್ಯ ಸರ್ಕಾರಿ ನೌಕರರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ವಿಧಾನಸೌಧದ ಬಳಿ ಇರುವ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಸರ್ಕಾರಿ ನೌಕರರು, ಹೊಸ ಪಿಂಚಣಿ ಯೋಜನೆಯಿಂದ ರಾಜ್ಯದ 1.80 ಲಕ್ಷ ಸರ್ಕಾರಿ ನೌಕರರು ನಿವೃತ್ತಿ ಸಂದರ್ಭದಲ್ಲಿ ಪಿಂಚಣಿ ಹಾಗೂ ಇತರ ಸೌಲಭ್ಯಗಳಿಂದ ವಂಚಿತರಾಗಿ ಸಾಮಾಜಿಕ ಅನ್ಯಾಯಕ್ಕೆ ಒಳಗಾಗುತ್ತಾರೆ. 

Advertisement

ಕೇಂದ್ರ ಸರ್ಕಾರದ ಅನಿಶ್ಚಿತ ಹಾಗೂ ಅಭದ್ರತೆಯ ಪಿಂಚಣಿ ಯೋಜನೆಯಿಂದ ದೇಶಾದ್ಯಂತ ನೌಕರರು ಹಾಗೂ ಕಾರ್ಮಿಕರು ಅನ್ಯಾಯಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ಹೊಸ ಪಿಂಚಣಿ ಯೋಜನೆಯನ್ನು ಕೈ ಬಿಟ್ಟು ಹಳೆಯ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಆಗ್ರಹಿಸಿದ್ದಾರೆ. 

ಸರ್ಕಾರ ನೌಕರರ ಬೇಡಿಕೆಗೆ ಸ್ಪಂದಿಸದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆ ನಂತರ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರಿ ನೌಕರರ ಮಂಜೇಗೌಡ ಬಣದ ವಿರುದ್ಧ ಶ್ರೀಕಾಂತ್‌ ಬಣ ಪ್ರತಿಭಟನೆ ನಡೆಸಿತು. ಆದರೆ, ಅವರನ್ನು ನೌಕರರ ಸಂಘದಿಂದ ವಜಾ ಮಾಡಲಾಗಿದೆ ಎಂದು ಮಂಜೇಗೌಡ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next