Advertisement

ಪಿಎಫ್‌ಐ-ಕೆಎಫ್‌ಡಿ ನಿಷೇಧಕ್ಕೆ ಆಗ್ರಹ

11:31 AM Aug 20, 2017 | Team Udayavani |

ಶಹಾಬಾದ: ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಬಿಜೆಪಿ ಮುಖಂಡ ಶರಣು ವಸ್ತ್ರದ್‌ ಮಾತನಾಡಿ, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಹಾಗೂ ಸಂಘ ಪರವಾರದ ಕಾರ್ಯಕರ್ತರ ಹತ್ಯೆ ಹಾಗೂ ಹಲ್ಲೆ ಪ್ರಕರಣಗಳಲ್ಲಿ ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆಗಳು ನೇರವಾಗಿ ಭಾಗಿಯಾಗಿವೆ. ಇದು ರುಜುವಾತಾಗಿದೆ. ಈ ಸಂಘಟನೆಗಳು ನಿಷೇಧಿತ ಸೀಮಿ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದು, ನಿಷೇಧಿತ ಸಂಘಟನೆಯ ಪದಾಧಿಕಾರಿಗಳೇ ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆ
ಪದಾಧಿಕಾರಿಗಳಾಗಿದ್ದಾರೆ ಎಂದು ಆಪಾದಿಸಿದರು. ಬಿಜೆಪಿ ಹಿರಿಯ ಮುಖಂಡ ಕನಕಪ್ಪ ದಂಡಗುಲಕರ್‌ ಮಾತನಾಡಿ, ಕರ್ನಾಟಕದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಸರಣಿ ಹತ್ಯೆಯಲ್ಲಿ ಮೈಸೂರಿನ ರಾಜು, ಬೆಂಗಳೂರಿನ ರುದ್ರೇಶ, ಮೂಡುಬಿದ್ರಿಯ ಪ್ರಶಾಂತ ಪೂಜಾರಿ ಕೊಲೆಯಲ್ಲಿ ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆಯವರೇ ಭಾಗಿಯಾಗಿದ್ದಾರೆ.ಆದ್ದರಿಂದ ಈ ಕೂಡಲೇ ಈ ಸಂಘಟನೆಗಳನ್ನು ನಿಷೇಧಿಸಬೇಕು. ಸಂಘಟನೆಗಳ ಆಸ್ತಿ ಮುಟ್ಟುಗೋಲು ಹಾಕಬೇಕು. ಎಲ್ಲಾ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು.ಈ
ಸಂಘಟನೆಗಳಿಗೆ ಕುಮಕ್ಕು ನೀಡುತ್ತಿರುವ ಸಚಿವ ರಮನಾಥ ರೈ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ನಾಗಣ್ಣ ರಾಂಪೂರೆ, ನಗರ ಉಪಾಧ್ಯಕ್ಷ ವಿರೇಶ ಬಂದೆಳ್ಳಿ, ಬಿಜೆಪಿ ಅಧ್ಯಕ್ಷ ಸುಭಾಷ ಜಾಪೂರ, ಚೇತನ ವಳಸಂಗ, ಅಶೋಕ ಜಿಂಗಾಡೆ, ರಾಜು ದಂಡಗುಲಕರ್‌, ದೇವದಾಸ ಜಾಧವ, ಸಿದ್ರಾಮ ಕುಸಾಳೆ, ಓಂಕಾರ ಹುಗ್ಗಿ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next