Advertisement

ಗುತ್ತಿಗೆ ಕಾರ್ಮಿಕರ ಮರು ನೇಮಕಕ್ಕೆ ಆಗ್ರಹ

12:36 PM Jun 29, 2018 | |

ಮೈಸೂರು: ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ವಾಪಸ್‌ ತೆಗೆದುಕೊಳ್ಳಬೇಕೆಂದು ಹೈಕೋರ್ಟ್‌ ತೀರ್ಪು ನೀಡಿದ್ದರೂ ಬಿಎಸ್ಸೆನ್ನೆಲ್‌ ಆಡಳಿತ ವರ್ಗ ಕೆಲಸ ನೀಡದೆ ನ್ಯಾಯಾಲಯದ ತೀರ್ಪನ್ನು ಉಲ್ಲಂ ಸಿದೆ ಎಂದು ಆರೋಪಿಸಿ ರಾಜ್ಯ ಬಿಎಸ್ಸೆನ್ನೆಲ್‌ ಕಾಯಂ ಅಲ್ಲದ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

Advertisement

ನಗರದ ಜಯಲಕ್ಷ್ಮೀಪುರಂನಲ್ಲಿರುವ ಬಿಎಸ್ಸೆನ್ನೆಲ್‌ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಬಿಸ್ಸೆನ್ನೆಲ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರನ್ನು ರಾಜ್ಯಾದ್ಯಂತ ಕೆಲಸದಿಂದ ತೆಗೆದುಹಾಕಲಾಗುತ್ತಿದೆ.

ಅದರಂತೆ ಮೈಸೂರಿನಲ್ಲೂ 60 ಮಂದಿ ಗುತ್ತಿಗೆ ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಆಡಳಿತ ಮಂಡಳಿಯ ತೀರ್ಮಾನದಿಂದಾಗಿ ಹಲವು ಗುತ್ತಿಗೆ ನೌಕರರು ಕೆಲಸವಿಲ್ಲದೆ ಜೀವನ ನಿರ್ವಹಣೆಗೂ ಪರದಾಡುವಂತಾಗಿದೆ ಎಂದು ಆರೋಪಿಸಿ ವಿವಿಧ ಘೋಷಣೆಗಳನ್ನು ಕೂಗಿದರು. 

ಈ ನಡುವೆ ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ವಾಪಸ್‌ ತೆಗೆದುಕೊಳ್ಳಬೇಕೆಂದು ಹೈಕೋರ್ಟ್‌ ತೀರ್ಪು ನೀಡಿದ್ದರೂ, ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಲದೆ ನ್ಯಾಯಾಲಯದ ಆದೇಶ ಉಲ್ಲಂ ಸಿರುವುದು ಖಂಡನೀಯ. ಹೀಗಾಗಿ ಬಿಸ್ಸೆನ್ನೆಲ್‌ ಆಡಳಿತ ವರ್ಗ ಈಗಲಾದರೂ ಎಚ್ಚೆತ್ತು ಕೆಲಸದಿಂದ ತೆಗೆದುಹಾಕಿರುವ ಗುತ್ತಿಗೆ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಬೇಕು,

ಎಲ್ಲಾ ಕಾರ್ಮಿಕರಿಗೂ ಪ್ರತಿ ತಿಂಗಳ 5ನೇ ತಾರೀಖೀನೊಳಗೆ ವೇತನ ನೀಡಬೇಕು, ನ್ಯಾಯಾಲಯದ ಆದೇಶದಂತೆ ಬೋನಸ್‌ ನೀಡಿ, ಇಎಸ್‌ಐ ಮತ್ತು ಪಿಎಫ್ ವ್ಯವಸ್ಥೆ ಹಾಗೂ ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು. 

Advertisement

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಶಬರೀಶ್‌ ಕುಮಾರ್‌, ಪ್ರಧಾನ ಕಾರ್ಯದರ್ಶಿ ರಾಮಲಿಂಗು, ಮಹದೇವಪ್ಪ, ಸಿಐಟಿಯು ಜಿಲ್ಲಾಧ್ಯಕ್ಷ ಬಾಲಾಜಿರಾವ್‌, ಬಾಬು, ಸುರೇಶ್‌ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಿಸ್ಸೆನ್ನೆಲ್‌ ನಾನ್‌ ಪರ್ಮನೆಂಟ್‌ ನೌಕರರ ಸಂಘದ ಹಲವು ಮಂದಿ ಭಾಗವಹಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next