Advertisement
ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹಾವೇರಿ, ಕೊಪ್ಪಳ, ಉತ್ತರ ಕನ್ನಡ, ಗದಗ, ವಿಜಯಪುರ, ಬಳ್ಳಾರಿ, ಬೀದರ್, ಕಲಬುರಗಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ವರ್ತಕರು, ವ್ಯಾಪಾರಿಗಳು ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿ ಬೀದಿಗಿಳಿದು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಕೋವಿಡ್‌ನಂಥ ಕ್ಲಿಷ್ಟಕರ ಪರಿಸ್ಥಿತಿಯಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದೇವೆ. ವಿದ್ಯುತ್ ದರ ಏರಿಕೆಯಿಂದ ಮತ್ತೆ ಬರೆ ಎಳೆಯಲಾಗುತ್ತಿದೆ. ಇದರಿಂದ ಕೈಗಾರಿಕೆಗಳು, ಅಂಗಡಿ-ಮುಂಗಟ್ಟು ಗಳನ್ನು ನಡೆಸುವುದೇ ಕಷ್ಟವಾಗಿದೆ. ತತ್‌ಕ್ಷಣವೇ ದರ ಏರಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
Related Articles
Advertisement
ವಿದ್ಯುತ್ ದರ ಹೆಚ್ಚಳ ಖಂಡಿಸಿ ಉಡುಪಿ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸ ಲಾಗಿದ್ದು, ಈ ಕಾರಣಕ್ಕೆ ಬುಧವಾರ ಪ್ರತಿಭಟನೆ ನಡೆಸಿಲ್ಲ ಎಂದು ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಇಂದು ಸಿಎಂ ಸಭೆ
ಬೆಂಗಳೂರು: ಕೈಗಾರಿಕೋದ್ಯಮಿ ಗಳು ನಡೆಸುತ್ತಿರುವ ಪ್ರತಿಭಟನೆ ರಾಜ್ಯ ಸರಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದ್ದು, ಕೈಗಾರಿಕೋದ್ಯಮಿ ಗಳ ಜತೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಹತ್ವದ ಸಭೆ ನಡೆಸ ಲಿದ್ಧಾರೆ. ವಿಧಾನಸೌಧದಲ್ಲಿ ಮಾತ ನಾಡಿದ ಸಣ್ಣ ಕೈಗಾರಿಕೆ ಸಚಿವ ಶರಣ ಬಸಪ್ಪ ದರ್ಶನಾಪುರ, ರಾಜ್ಯದ ಕೆಲವೆಡೆ ಸಣ್ಣ ಕೈಗಾರಿಕೆಗಳ ಸಂಘಗಳು ಪ್ರತಿಭಟನೆ ಮಾಡು ತ್ತಿವೆ. ದರ ಪರಿಷ್ಕರಣೆ ನಿರ್ಧಾರ ಸರಕಾರದ್ದಲ್ಲ. ಕೆಇಆರ್‌ಸಿ ವಿದ್ಯುತ್ ದರ ಹೆಚ್ಚಳ ಮಾಡಿದೆ. ಈ ಸಂಬಂಧ ಸಿಎಂ ಜತೆ ಶುಕ್ರವಾರ ಸಭೆ ಕರೆಯಲಾಗಿದೆ ಎಂದರು.