Advertisement
ಬುಧವಾರ ಸದನ ಆರಂಭವಾಗುತ್ತಿದ್ದಂತೆ ಮೀಸಲಾತಿ ಹೆಚ್ಚಳ ಕುರಿತು ಎಸ್‌ಟಿ ಸಮುದಾಯದ ಶಾಸಕರು ಪ್ರತಿಭಟನೆಗೆ ಮುಂದಾಗಿದ್ದರಿಂದ ಮಧ್ಯಪ್ರವೇಶಿಸಿ ಉತ್ತರಿಸಿದ ಅವರು, ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿಯಿಂದ ಮಧ್ಯಂತರ ವರದಿ ಹಾಗೂ ಅಡ್ವೋಕೇಟ್ ಜನರಲ್ ಅವರಿಂದ ವರದಿಯನ್ನು ಶೀಘ್ರವಾಗಿ ಪಡೆದು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
Related Articles
Advertisement
ಪರಿಶಿಷ್ಟ ಜಾತಿ, ಪಂಗಡದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕಿದ್ದು, ಅದಕ್ಕೆ ನಮ್ಮ ಬದ್ದತೆ ಇದೆ. ಇಂದಿರಾ ಸಹಾನಿ ಪ್ರಕರಣದಲ್ಲಿ ವಿಶೇಷ ಸಂದರ್ಭವೆಂದು ಸಾಬೀತುಪಡಿಸಿದರೆ ಮೀಸಲಾತಿಯನ್ನು ಶೇ. 50ಕ್ಕಿಂತ ಹೆಚ್ಚಿಸಲು ಸಣ್ಣ ಅವಕಾಶವಿದೆ. ಅದನ್ನು ಬಳಸಿಕೊಳ್ಳುವ ಯಾವ ರೀತಿ ಮೀಸಲಾತಿ ಹೆಚ್ಚಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ವರದಿ ನೀಡಲು ಅಡ್ವೋಕೇಟ್ ಜನರಲ್‌ಗೆ ಸೂಚಿಸಲಾಗಿದೆ ಎಂದು ಹೇಳಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಇಂದಿರಾ ಸಹಾನಿ ಪ್ರಕರಣದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.50 ಮೀರಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಆದರೆ ವಿಶೇಷ ಸಂದರ್ಭವೆಂದು ಮನವರಿಕೆ ಮಾಡಿಕೊಟ್ಟರೆ ಮೀಸಲಾತಿ ಹೆಚ್ಚಿಸಲು ಅವಕಾಶವಿದೆ. ಆದರೆ ಈಗಾಗಲೇ ಮುಂದುವರಿದ ಜಾತಿಗಳ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಯನ್ನು ಕೇಂದ್ರ ಸರಕಾರ ಕಲ್ಪಿಸಿದ್ದು, ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.60ರಷ್ಟಾಗಿದೆ ಎಂದು ಹೇಳಿದರು.
ನಾಗಮೋಹನ್‌ದಾಸ್ ಸಮಿತಿಯು ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿದೆ. ಹಿಂದುಳಿದ ವರ್ಗಗಳ ಆಯೋಗವಿರುವಾಗ ಸರಕಾರ ನಿವೃತ್ತ ನ್ಯಾ. ಸುಭಾಷ್ ಆಡಿ ಸಮಿತಿ ರಚಿಸಿರುವುದು ಎಷ್ಟು ಸೂಕ್ತ ಎಂಬ ಬಗ್ಗೆ ಕಾನೂನುತಜ್ಞರ ಸಲಹೆ ಪಡೆಯಬೇಕು ಎಂದರು.
ಈಗಾಗಲೇ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಲ್ಲಿ ಮೀಸಲಾತಿ ಶೇ. 50ಕ್ಕಿಂತ ಹೆಚ್ಚಾಗಿದೆ. ರಾಜ್ಯದಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ/ ಪಂಗಡದವರಿಗೆ ಮೀಸಲಾತಿ ನೀಡದಿದ್ದರೆ ಅನ್ಯಾಯವಾಗಲಿದೆ ಎಂದು ಹೇಳಿದರು.
ಟಿ.ರಘುಮೂರ್ತಿ ಮಾತನಾಡಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರವನ್ನು ಸುಭಾಷ್ ಆಡಿ ಸಮಿತಿಯಿಂದ ಬೇರ್ಪಡಿಸಿ ನಾಗಮೋಹನ್‌ದಾಸ್ ಸಮಿತಿ ವರದಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇಂದಿರಾ ಸಹಾನಿ ಪ್ರಕರಣದ ತೀರ್ಪಿನಂತೆ ವಿಶೇಷ ಸಂದರ್ಭವೆಂದು ಪರಿಗಣಿಸಿ ಮೀಸಲಾತಿ ಹೆಚ್ಚಿಸಲು ಅವಕಾಶವಿದೆ. ನಾಗಮೋಹನ್‌ದಾಸ್ ಸಮಿತಿ ವರದಿ ನೀಡಿದ್ದು, ಸ್ವಾಮೀಜಿಗಳು ಧರಣಿ ಆರಂಭಿಸಿ 49 ದಿನಗಳಾಗಿವೆ. ಸಮುದಾಯದಲ್ಲಿ ಒಗಟ್ಟು ಇದ್ದಿದ್ದರೆ 2 ದಿನವೂ ಸ್ವಾಮೀಜಿಗಳು ಧರಣಿ ನಡೆಸುವ ಸ್ಥಿತಿ ಬರುತ್ತಿಲ್ಲ. ಸಚಿವರನ್ನು ಕಳುಹಿಸುವ ಬದಲಿಗೆ ಮುಖ್ಯಮಂತ್ರಿಯವರೇ ಖುದ್ದಾಗಿ ಸ್ವಾಮೀಜಿಗಳ ಮನವೊಲಿಸಬೇಕು.– ರಾಜೂಗೌಡ, ಬಿಜೆಪಿ ಶಾಸಕ ಸುಭಾಷ್ ಆಡಿ ಸಮಿತಿ ವರಿಯನ್ನು ಅತಿ ಶೀಘ್ರವಾಗಿ ಪಡೆಯುವುದು ಎಂದರೆ ಎಂದರೆ 10 ದಿನವೋ, ಒಂದು ತಿಂಗಳ್ಳೋ ಎಂದು ಸಿಎಂ ಸ್ಪಷ್ಟಪಡಿಸಬೇಕು. ಈಗಾಗಲೇ ವಿಳಂಬವಾಗಿದೆ.
– ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಾಸಕ