Advertisement
ನಗರದ ವಿದ್ಯಾರ್ಥಿನಿಲಯದಿಂದ ಶಿಡ್ಲಘಟ್ಟದ ವೃತ್ತದವರೆಗೆ ಕನ್ನಡ ಬಾವುಟದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು, ರಾಜ್ಯ ಸರ್ಕಾರ ಪಠ್ಯಪುಸ್ತಕ ಗೊಂದಲ ನಿವಾರಿಸಿ, ಹಳೇ ಪುಸ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್‌ಪಾಸ್ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
Related Articles
Advertisement
ಮಾನವೀಯ ಸಂದೇಶ ನೀಡಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಗತ್‌ಸಿಂಗ್, ಮಾನವೀಯ ಸಂದೇಶವನ್ನು ನೀಡಿದರು. ಸಮಾಜವನ್ನು ಸುಧಾರಣೆ ಮಾಡಿದ ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಹೇಳನೆ ಮಾಡುವುದನ್ನು ನಾವು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.
ಜನಜಾಗೃತಿ ಅಭಿಯಾನ: ನಿಜಾಂಶವನ್ನು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ತಿಳಿಸುವ ಕೆಲಸವನ್ನು ಮಾಡುವ ಸಲುವಾಗಿ ಜನಜಾಗೃತಿ ಅಭಿಯಾನ ವನ್ನು ನಡೆಸುತ್ತಿದ್ದೇವೆ. ಜೊತೆಗೆ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಎನ್‌ಎಸ್‌ಯುಐ ಸದಾ ಬೆಂಬಲ ವ್ಯಕ್ತಪಡಿಸಿ ಹೋರಾಟ ನಡೆಸುತ್ತದೆ ಎಂದು ವಿವರಿಸಿದರು. ಎನ್‌ಎಸ್‌ಯುಐ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಯ್‌ಕುಮಾರ್, ರಾಜ್ಯ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ದಿನೇಯ್ ದೀಪಕ್, ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಶಿವಾನಂದ, ಪ್ರಧಾನ ಕಾರ್ಯದರ್ಶಿ ಮದನ್ ಮೋಹನ್, ಮುರಳಿ, ಕಾಂಗ್ರೆಸ್ ಸಾಮಾಜಿಕ ಜಾಲಾತಾಣ ಜಿಲ್ಲಾಧ್ಯಕ್ಷ ಶಾಹಿದ್ ಅಬ್ಟಾಸ್, ಹಮೀಮ್, ನರಸಿಂಹಮೂರ್ತಿ, ಸಂತೋಷ, ಸಂಘಟನೆಯ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.