ಗುಂಡ್ಲುಪೇಟೆ: ಬ್ರಾಹ್ಮಣ ಸಮಾಜದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಪ.ಮಲ್ಲೇಶ್ ಅವರನ್ನು ಬಂಧಿಸಬೇಕೆಂದು ಬ್ರಾಹ್ಮಣ ಸಮಾಜದ ತಾಲೂಕು ಅಧ್ಯಕ್ಷ ಕೆ.ವಿ.ಗೋಪಾಲಕೃಷ್ಣ ಭಟ್ಟ ಒತ್ತಾಯಿಸಿದರು.
ಇತ್ತೀಚಿನ ದಿನಗಳಲ್ಲಿ ಕೆಲಕಡೆ ನಡೆಯುವ ಖಾಸಗಿ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೇವಲ ಬ್ರಾಹ್ಮಣ ಜನಾಂಗದವರನ್ನೆ ಟಾರ್ಗೆಟ್ ಮಾಡಿ ವಿನಾಃ ಕಾರಣ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಬ್ರಾಹ್ಮಣರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ. ಬ್ರಾಹ್ಮಣ ಜನಾಂಗದ ವಿರುದ್ಧ ಅವಹೇಳನ ಕಾರಿ ಹೇಳಿಕೆ ನೀಡುವುದನ್ನು ಜನಾಂಗದವರು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ.ಮಲ್ಲೇಶ್ ಕೂಡಲೇ ಹೇಳಿಕೆ ವಾಪಸ್ ಪಡೆದು ಬ್ರಾಹ್ಮಣ ಸಮಾಜಕ್ಕೆ ಬಹಿರಂಗ ಕ್ಷಮೆಯಾಚಿಸಬೇಕು. ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಳು ಮಾಡುವ ಪ್ರಯತ್ನ ಇದಾಗಿದ್ದು, ಇವರ ವಿರುದ್ಧ ಪ್ರಕರಣ ದಾಖಲು ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.