Advertisement
ಈ ಹಿಂದೆ ಮರಗಳನ್ನು ತೆರವುಗೊಳಿಸಲು ಸ್ಥಳೀಯರು ಗ್ರಾ.ಪಂ.ಗೆ ಮನವಿ ನೀಡಿದ್ದು, ಅದನ್ನು ಅರಣ್ಯ ಇಲಾಖೆಗೆ ರವಾನಿಸಲಾಗಿದೆ. ಆದರೆ ಅರಣ್ಯ ಇಲಾಖೆಯವರು ಈ ಕುರಿತು ಇನ್ನೂ ಕೂಡ ಕ್ರಮಕೈಗೊಂಡಿಲ್ಲ ಎನ್ನಲಾಗಿದೆ. ಈ ಬಾರಿ ಮಳೆಗಾಲದಲ್ಲಿ ಮರಗಳು ಖಂಡಿತವಾಗಿ ರಸ್ತೆಗೆ ಉರುಳಲಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.
ಒಂದು ವೇಳೆ ಮರಗಳು ರಸ್ತೆಗುರುಳಿದಲ್ಲಿ ವಾಹನಗಳು, ಸವಾರರು ಹಾಗೂ ಪಾದಚಾರಿಗಳಿಗೆ ಅಪಾಯ ಎದುರಾಗಲಿದೆ ಅಥವಾ ವಿದ್ಯುತ್ ತಂತಿಯ ಮೇಲೆ ಬಿದ್ದು ಅನಾಹುತ ಉಂಟಾಗುವ ಸಂಭವವಿದೆ. ಹೀಗಾಗಿ ದೊಡ್ಡ ಮಟ್ಟದ ಅಪಾಯ ಉಂಟಾಗುವ ಮುನ್ನ ಸಂಬಂಧಪಟ್ಟ ಇಲಾಖೆಯವರು ಕ್ರಮಕೈಗೊಳ್ಳಬೇಕು ಎನ್ನುವುದು ನಾಗರಿಕರ ಆಗ್ರಹವಾಗಿದೆ.