Advertisement

ನೀರು ಬಿಡುಗಡೆಗೆ ಜನಪ್ರತಿನಿಧಿಗಳ ಆಗ್ರಹ

11:55 AM May 07, 2019 | Suhan S |

ಬೆಳಗಾವಿ: ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಗಂಭೀರವಾಗಿರುವ ಹಿನ್ನೆಲೆಯಲ್ಲಿ ತಕ್ಷಣವೇ ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಜಲಸಂಪನ್ಮೂಲ ಸಚಿವರನ್ನು ಒತ್ತಾಯಿಸಿದರು.

Advertisement

ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಿನ್ನೆಲೆಯಲ್ಲಿ ಸೋಮವಾರ ನಗರದ ಕರ್ನಾಟಕ ನೀರಾವರಿ ನಿಗಮದ ಕಚೇರಿಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರು ಹಾಗೂ ಸಂಸದರು ಈ ಆಗ್ರಹ ಮಾಡಿದರು.

ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕೃಷ್ಣಾ ನದಿ ತೀರದ ಮೂರು ಜಿಲ್ಲೆಗಳ 200 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ. ಈ ಅವಧಿಯಲ್ಲಿ ನಾವು ಅನಿವಾರ್ಯವಾಗಿ ಮಹಾರಾಷ್ಟ್ರವನ್ನು ಅವಲಂಬಿಸಬೇಕಾಗುತ್ತದೆ. ಮಹಾರಾಷ್ಟ್ರ ನೀರು ಬಿಡುಗಡೆ ಮಾಡಿದರೂ ಅದು ಕೊನೆಯ ಹಳ್ಳಿಗೆ ಬರುವುದು ಬಹಳ ಕಡಿಮೆ. ಹೀಗಾಗಿ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರಕಾರ ಮುಂದಾಗಬೇಕು ಎಂದು ಶಾಸಕರು ಸಲಹೆ ನೀಡಿದರು.

ಈಗ ತಕ್ಷಣಕ್ಕೆ ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ನಂತರ ಯಾವುದೇ ವಿಳಂಬ ಮಾಡದೆ ಮಹಾರಾಷ್ಟ್ರ ಸರಕಾರದ ಜೊತೆ ನೀರು ವಿನಿಮಯದ ಒಡಂಬಡಿಕೆ ಮಾಡಿಕೊಳ್ಳಬೇಕು ಎಂದು ಶಾಸಕರು ಆಗ್ರಹಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್‌ ವಿರೋಧಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಕೃಷ್ಣಾ ನದಿ ತೀರದ ಜನರ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರದ ಜೊತೆ ಒಡಂಬಡಿಕೆ ಮಾಡಿಕೊಳ್ಳಲು ಕರ್ನಾಟಕ ಸರಕಾರ ಮುಂದಾಗಿರುವುದು ಒಳ್ಳೆಯ ವಿಚಾರ. ಇದು ತ್ವರಿತವಾಗಿ ಕಾರ್ಯರೂಪಕ್ಕೆ ಬರಬೇಕು. ಇದರಿಂದ ಬರ ಪೀಡಿತ ಪ್ರದೇಶಗಳ ಜನರಿಗೆ ಬಹಳ ಅನುಕೂಲವಾಗಲಿದೆ. ಇದಲ್ಲದೆ ನೀರು ಉಳಿತಾಯ ಮಾಡುವ ನಿಟ್ಟಿನಲ್ಲಿ ಹನಿ ನೀರಾವರಿ ಪದ್ಧತಿಗೆ ಹೆಚ್ಚಿನ ಅದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ನಂತರ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ, ಮಹಾರಾಷ್ಟ್ರ ಸರಕಾರದ ಜೊತೆ ನೀರು ವಿನಿಮಯ ಒಡಂಬಡಿಕೆ ಮಾಡಿಕೊಳ್ಳಲು ಕರ್ನಾಟಕ ಸರಕಾರ ಸಿದ್ಧವಿದೆ. ಇದಕ್ಕೆ ಯಾವ ಭಾಗದಿಂದ ನೀರು ಬಿಡಬೇಕು. ಎಲ್ಲಿ ನೀರು ಉಳಿತಾಯ ಮಾಡಬೇಕು ಎಂಬುದರ ಬಗ್ಗೆ ಅಧ್ಯಯನ ನಡೆಸಲು ತಾಂತ್ರಿಕ ಸಮಿತಿ ರಚಿಸಲಾಗುವುದು. ಈ ಸಮಿತಿ ನೀಡುವ ವರದಿ ಆಧಾರದ ಮೇಲೆ ಒಡಂಬಡಿಕೆ ಪ್ರಕ್ರಿಯೆ ಆರಂಭಿಸಲಾಗುವದು ಎಂದು ಹೇಳಿದರು.

Advertisement

ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್‌ ಅರವಿಂದ ಕಣಗಿಲ್, ಕೃಷ್ಣಾ ನದಿ ತೀರದಲ್ಲಿ ಉಂಟಾಗಿರುವ ನೀರಿನ ಸಮಸ್ಯೆ ಹಾಗೂ ನೀರು ವಿನಿಮಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಸಚಿವರಾದ ಸತೀಶ್‌ ಜಾರಕಿಹೊಳಿ, ಆರ್‌.ಬಿ.ತಿಮ್ಮಾಪುರ, ಸರ್ಕಾರದ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಸಂಸದರಾದ ಪ್ರಕಾಶ ಹುಕ್ಕೇರಿ, ಪಿ.ಸಿ.ಗದ್ದಿಗೌಡರ, ರಾಜ್ಯಸಭೆ ಸದಸ್ಯ ಡಾ| ಪ್ರಭಾಕರ ಕೋರೆ, ಶಾಸಕರಾದ ಮಹಾಂತೇಶ ಕೌಜಲಗಿ, ಮಹೇಶ ಕುಮಠಳ್ಳಿ,

ಶ್ರೀಮಂತ ಪಾಟೀಲ, ಆನಂದ ನ್ಯಾಮಗೌಡ, ಸಿದ್ದು ಸವದಿ, ವಿಧಾನ ಪರಿಷತ್‌ ಸದಸ್ಯರಾದ ಎಸ್‌. ಆರ್‌.ಪಾಟೀಲ, ಹನುಮಂತ ನಿರಾಣಿ ಉಪಸ್ಥಿತರಿದ್ದರು. ಆದರೆ ರಾಯಬಾಗ ಶಾಸಕ ದುರ್ಯೊಧನ ಐಹೊಳೆ, ಕುಡಚಿ ಶಾಸಕ ಪಿ ರಾಜೀವ್‌, ನಿಪ್ಪಾಣಿ ಶಾಸಕಿ ಶಶಿಕಲಾ

Advertisement

Udayavani is now on Telegram. Click here to join our channel and stay updated with the latest news.

Next