Advertisement
ನಂತರ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ನಗರದಲ್ಲಿ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಟ್ರಕ್ ಟರ್ಮಿನಲ್ ನಿರ್ಮಾಣ ಬೇಡಿಕೆ ಇದೀಗ ಜಾರಿಗೆ ತರುವ ಕೆಲಸ ಮಾಡಲಾಗಿದೆ. ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್‌ಗೆ ಈಗಾಗಲೇ 25 ಕೋಟಿ ರೂ. ಮಂಜೂರು ಮಾಡಿದ್ದು, ಇನ್ನೂ ಅನುದಾನ ಅಗತ್ಯವಿದ್ದಲ್ಲಿ ಒದಗಿಸಲಾಗುವುದು. ಹೊಸಪೇಟೆ ಹೆದ್ದಾರಿಯಲ್ಲಿ ಸದಾ ಟ್ರಾμಕ್ ಜಾಮ್ ಸಮಸ್ಯೆ.
Related Articles
Advertisement
ಈ ಟರ್ಮಿನಲ್ ನಲ್ಲಿ ಡಾರ್ಮೆಟರಿ, ಸುಲಭ ಶೌಚಾಲಯ, ಕ್ಯಾಂಟೀನ್, ವೇರ್‌ಹೌಸ್, ಪೆಟ್ರೋಲ್ ಬಂಕ್, ವರ್ಕಶಾಪ್, ಬಿಡಿಭಾಗಗಳ ಅಂಗಡಿ ಮತ್ತು ವೇ ಬ್ರಿಡ್ಜ್ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು. 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಟ್ರಕ್ ಟರ್ಮಿನಲ್ ಅತ್ಯಂತ ಗುಣಮಟ್ಟದಿಂದ ನಿರ್ಮಿಸಬೇಕು. ಗುಣಮಟ್ಟದ ವಿಷಯದಲ್ಲಿ ಯಾವುದೇ ರೀತಿಯ ರಾಜೀ ಮಾಡಿಕೊಳ್ಳಲಾಗದು ಎಂದು ಗುತ್ತಿಗೆದಾರರಿಗೆ ಎಚ್ಚರಿಸಿದರು. ಡಿ. ದೇವರಾಜ ಅರಸ್ ಟ್ರಕ್ ಟ್ರಮಿನಲ್ ಅಧ್ಯಕ್ಷ ಡಿ.ಎಸ್. ವೀರಯ್ಯ ಮಾತನಾಡಿ, ಸಾರಿಗೆ ಸಚಿವ ಶ್ರೀರಾಮುಲು ಅವರು ಸಾರಿಗೆ ಖಾತೆಯ ಜವಾಬ್ದಾರಿ ಹೊತ್ತ ತಕ್ಷಣ ಎಲ್ಲ ಅ ಧಿಕಾರಿಗಳೊಂದಿಗೆಸಭೆ ನಡೆಸಿ ಕ್ಷಿಪ್ರಗತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಂದು ಹೆದ್ದಾರಿಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡುವುದರಿಂದ ಅಪಘಾತಗಳನ್ನು ತಡೆಯಬಹುದಾಗಿದೆ ಎಂದರು. ಟ್ರಕ್ ಟರ್ಮಿನಲ್‌ನಲ್ಲಿ 500ರಿಂದ 1 ಸಾವಿರ ಲಾರಿಗಳನ್ನು ನಿಲ್ಲಿಸಬಹುದಾಗಿದೆ. ಈ ಟರ್ಮಿನಲ್‌ಗಳಿಂದ ವಾಹನ ದಟ್ಟಣೆ, ಮಾಲಿನ್ಯ ತಡೆಯಬಹುದು ಎಂದರು. ಈ ಸಂದರ್ಭದಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಎಸ್. ಶಂಕರಪ್ಪ, ನಗರಸಬೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಆನಂದ ಇನ್ನಿತರರಿದ್ದರು.