Advertisement

ಯೂರಿಯಾ ಪೂರೈಕೆಗೆ ಆಗ್ರಹ

03:36 PM Aug 05, 2020 | Suhan S |

ಹೊಳಲ್ಕೆರೆ: ಯೂರಿಯಾ ಗೊಬ್ಬರ ಪೂರೈಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಗೊಬ್ಬರದ ಅಂಗಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Advertisement

ಕೃಷಿ ಇಲಾಖೆ ರೈತರಿಗೆ ಅಗತ್ಯ ಗೊಬ್ಬರ ಪೂರೈಕೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ತಾಲೂಕಿನಲ್ಲಿ ಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದೆ. ಗೊಬ್ಬರವಿದ್ದರೂ ಮಾರಾಟಗಾರರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ನಿಗದಿತ ಬೆಲೆಗಿಂತ ದುಪ್ಪಟ್ಟು ಬೆಲೆಯನ್ನು ನಿಗದಿ ಮಾಡಿ ಮಾರಾಟ ಮಾಡುತ್ತಿರುವ ಅಂಗಡಿ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೆ ಅವರ ಏಜಂಟರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು.

ರೈತ ಸಂಘದ ಕಾರ್ಯದರ್ಶಿ ಲೋಕೇಶ್‌ ಮಾತನಾಡಿ, ಸಿದ್ದೇಶ್ವರ ಏಜೆನ್ಸಿ ಮಾಲೀಕರು 248 ರೂ. ಬೆಲೆಯ ಗೊಬ್ಬರವನ್ನು 380 ರೂ,ಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಗೊಬ್ಬರ ಕೇಳಿದರೆ ಇಲ್ಲವೆಂದು ತಿಳಿಸಿ ಕಾಳಸಂತೆಯಲ್ಲಿ ಗೊಬ್ಬರವನ್ನು ಆಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಏಜೆನ್ಸಿ ಪರವಾನಗಿ ರದ್ದುಪಡಿಸಬೇಕು ಎಂದು ಕೃಷಿ ಇಲಾಖೆ ಮುಂದಾಗಬೇಕೆಂದು ಆಗ್ರಹಿಸಿದರು.

ರೈತ ಸಂಘದ ಗೌರವಾಧ್ಯಕ್ಷ ಬಸವನಕೋಟೆ ನಾಗರಾಜ್‌, ಕಾರ್ಯದರ್ಶಿ ಅಜಯ್‌, ಗೌಡರ ಮಂಜುನಾಥ, ಶಿವಸ್ವಾಮಿ, ಪ್ರಕಾಶ್‌, ರಾಜೇಶ್‌, ಕುಮಾರ್‌, ಪರಮೇಶ್ವರ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next