Advertisement

ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಆಗ್ರಹ

01:03 PM Jun 06, 2017 | |

ಮೈಸೂರು: ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವಂತೆ ಹಾಗೂ ಮೈಸೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ನಿಯಂತ್ರಿಸುವಂತೆ ಒತ್ತಾಯಿಸಿ ದ ಸಂಸ ಪದಾಧಿಕಾರಿಗಳು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಹಲವು ಭಾಷೆ, ಸಂಸ್ಕೃತಿ ಹಾಗೂ ಆಚರಣೆಗಳು ಜಾರಿಯಲ್ಲಿದ್ದು, ಇಂತಹ ದೇಶದಲ್ಲಿ ಆಹಾರ ಪ್ರತಿಯೊಬ್ಬರ ಹಕ್ಕು ಎಂದು ಸಂವಿಧಾನದಲ್ಲೇ ಹೇಳಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ಕಾನೂನು ಜಾರಿಗೊಳಿಸಲು ಮುಂದಾಗಿದ್ದು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾನೂನು ಸಂವಿಧಾನ ಬಾಹಿರವಾಗಿದ್ದು, ಪ್ರಜಾಪ್ರಭುತ್ವ ವಿರೋಧಿಯೂ ಆಗಿದೆ.ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬೇಕೆಂದು ಒತ್ತಾಯಿಸಿ ಧಿಕ್ಕಾರ ಕೂಗಿದರು.

ಡೆಂಗ್ಯೂ ನಿಯಂತ್ರಿಸಿ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ‌ಂತ ಡೆಂಗ್ಯೂ ತಾಂಡವವಾಡುತ್ತಿದ್ದು, ಬಹುತೇಕ ಜನರು ಡೆಂಗ್ಯೂ ರೋಗದಿಂದ ಬಳಲುತ್ತಿದ್ದಾರೆ. ಅಲ್ಲದೆ ಡೆಂಗ್ಯೂ ಸಮಸ್ಯೆಗೆ ಗುರಿಯಾಗಿ ಈಗಾಗಲೇ ಹಲವರು ಸಾವನ್ನಪ್ಪಿದ್ದು, ಹೀಗಿದ್ದರೂ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಡೆಂಗ್ಯೂ ನಿಯಂತ್ರಿಸುವ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು,

-ಡೆಂಗ್ಯೂ  ನಿಯಂತ್ರಿಸುವ ಜತೆಗೆ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಪ್ರತಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ತುತ್ತಾಗಿರುವ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ರಾಜಶೇಖರ ಕೋಟೆ, ಬೆಲವತ್ತ ರಾಮಚಂದ್ರ, ದೇವಗಳ್ಳಿ ಸೋಮಶೇಖರ, ಎ.ಗಣೇಶ್‌, ಅಲಗೂಡು ಗಣೇಶ್‌ ಇನ್ನಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next