Advertisement
ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ಏಕದಿನ ಪಂದ್ಯದ ವೇಳೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿದ ಆರೋಪದ ಮೇಲೆ ಪಾಲಿಕೆಯ ಅಧಿಕಾರಿಗಳು ಜ.20 ರಂದು 50 ಸಾವಿರ ರೂ. ದಂಡ ವಿಧಿಸಿದ್ದರು.ಆದರೆ, ಈವರೆಗೆ ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿ ಈ ದಂಡವನ್ನು ಪಾವತಿ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಡಿಮ್ಯಾಂಡ್ ನೋಟಿಸ್ ಜಾರಿ ಮಾಡಲಾಗಿದ್ದು, ಎರಡು ದಿನಗಳ ಒಳಗಾಗಿ ದಂಡ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಒಂದೊಮ್ಮೆ ಎರಡು ದಿನಗಳಲ್ಲಿ ದಂಡ ಪಾವತಿ ಮಾಡದೆ ಇದ್ದರೆ ಕಾನೂನಿನ ಪ್ರಕಾರ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಉದ್ದಿಮೆಯನ್ನು ಮುಚ್ಚುಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪಾಲಿಕೆ ಎಚ್ಚರಿಸಿದೆ. Advertisement
ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿಗೆ ಡಿಮ್ಯಾಂಡ್ ನೋಟಿಸ್
10:08 AM Jan 29, 2020 | sudhir |
Advertisement
Udayavani is now on Telegram. Click here to join our channel and stay updated with the latest news.