Advertisement

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಿ

04:58 AM Jul 05, 2020 | Lakshmi GovindaRaj |

ಗುಂಡ್ಲುಪೇಟೆ: ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಮನವಿ ಪತ್ರವನ್ನು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಕಳುಹಿಸಲಾಯಿತು. ನೌಕರರ ಪ್ರಮುಖ ಬೇಡಿಕೆಗಳಾದ ಸರ್ಕಾರಿ ಆದೇಶದಂತೆ 14ನೇ ಹಣಕಾಸು ಆಯೋಗದ ಹಣದಲ್ಲಿ ಸಿಬ್ಬಂದಿಗೆ ವೇತನ ಕೊಡಬೇಕು.

Advertisement

ಸರ್ಕಾರಿ ಆದೇಶದಂತೆ ತೆರಿಗೆ  ವಸೂಲಾತಿಯಲ್ಲಿ ಶೇ.40 ಹಣದಲ್ಲಿ ಬಾಕಿ ಉಳಿದ ಹಳೆಯ ವೇತನ ಪಾವತಿಸಬೇಕು ಹಾಗೂ ನಿವೃತ್ತರಾದ ನೌಕರರಿಗೂ ಗ್ರಾಚ್ಯುಟಿ ಕೊಡಬೇಕು ಎಂಬಿತ್ಯಾದಿ ಬೇಡಿಕೆಯನ್ನು ಬನ್ನಿತಾಳಪುರ ಗ್ರಾಮ ಪಂಚಾಯಿತಿಯಲ್ಲಿ ಸಂಘದ ತಾಲೂಕು  ಅಧ್ಯಕ್ಷ ಚಿಕ್ಕತುಪ್ಪೂರು ಮಲ್ಲು ಮತ್ತು ಪದಾಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್‌ಗೆ ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next