ಹುಣಸೂರು: ಮೇಲಿನ ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ಸಿಂಗ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಹಾಗೂ ದೆಹಲಿಯಲ್ಲಿ ಪೊಲೀಸರ ದೌರ್ಜನ್ಯ ಖಂಡಿಸಿ ವಿವಿಧ ಸಂಘಟನೆಗಳವರು ಹುಣಸೂರಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸಂವಿದಾನಸರ್ಕಲ್‌ನಲ್ಲಿ ಸಮಾವೇಶಗೊಂಡ ಡಿಎಸ್‌ಎಸ್, ರಾಜ್ಯ ರೈತ ಸಂಘ, ಡಿ.ಎಚ್.ಎಸ್ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ದ ದಿಕ್ಕಾರ ಮೊಳಗಿಸಿದರು.
ಈ ವೇಳೆ ಸಿಪಿಎಂ ಮುಖಂಡ ಬಸವರಾಜುವಿ.ಕಲ್ಕುಣಿಕೆ ಮಾತನಾಡಿ ಒಲಂಪಿಕ್ ಪದಕ ವಿಜೇತರು, ವಿಶ್ವಚಾಂಪಿಯನ್ ಕುಸ್ತಿಪಟುಗಳು ದೇಶದ ಹೆಮ್ಮೆ, ಇವರು ತಮ್ಮ ಮೇಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪಿ ವಿರುದ್ದ ಕ್ರಮಕ್ಕೆ ತಿಂಗಳಿನಿಂದ ನವದೆಹಲಿಯ ಜಂತರ್‌ಮಂಥರ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತಿದ್ದಾರೆ. ಆದರೂ ಇದರ ಕುರಿತು ಕೇಂದ್ರದ ಬಿ.ಜೆ.ಪಿ. ಸರಕಾರ ಅವರ ನ್ಯಾಯಯುತ ಬೇಡಿಕೆಗಳ ಬಗ್ಗೆ ಗಮನಹರಿಸುತ್ತಿಲ್ಲ. ಪೊಲೀಸರಿಗೆ ದೂರು ನೀಡಿದ್ದರೂ ಸಹ ಎಫ್.ಐ.ಆರ್ ದಾಖಲಾಗಿರಲಿಲ್ಲ. ಸುಪ್ರೀಂ ಕೋರ್ಟ್ನ ಮಧ್ಯ ಪ್ರವೇಶದ ನಂತರವಷ್ಟೇ ಎಫ್.ಐ.ಆರ್. ದಾಖಲಿಸಲಾಗಿದೆ. ಹೀಗಿದ್ದರೂ ಆರೋಪಿಯನ್ನು ಬಂಧಿಸಿಲ್ಲ. ಕುಸ್ತಿಪಟುಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ನಾಚೀಕೆಗೇಡಿನ ಸಂಗತಿ ಎಂದರು.
ನವ ನಿರ್ಮಾಣ ವೇದಿಕೆಯ ಮುಖ್ಯಸ್ಥ ಹರಿಹರಆನಂದಸ್ವಾಮಿ ಮಾತನಾಡಿ ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತವರ ಸಿಬ್ಬಂದಿಗಳು ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವುದು ಅತ್ಯಂತ ಆಘಾತಕಾರಿ ಮತ್ತು ದೇಶವೇ ತಲೆ ತಗ್ಗಿಸುವಂತಹ ಘಟನೆಯಾಗಿದೆ.
ದಸಂಸ ಮುಖಂಡ ಅತ್ತಿಕುಪ್ಪೆ ರಾಮಕೃಷ್ಣ ಆರೋಪಿ ಸಂಸದನನ್ನು ಬಿ.ಜೆ.ಪಿ ರಕ್ಷಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ತಪ್ಪಿತಸ್ಥರ ವಿರುದ್ದ ಕ್ರಮವಾಗದಿದ್ದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದೆಂದು ಎಚ್ಚರಿಸಿದರು. ರೈತಸಂಘದ ತಾಲೂಕು ಅಧ್ಯಕ್ಷ ಚಿಕ್ಕಣ್ಣ, ಸಿಪಿಎಂ ಕಾರ್ಯದರ್ಶಿ ಬೆಳ್ತೂರು ವೆಂಕಟೇಶ್ ಸರಕಾರದ ನಡೆಯನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ರೈತಸಂಘದ ಮುಖಂಡರಾದ ಕಿರಿಜಾಜಿಧನಂಜಯ, ಮಣಿ, ಬಸವರಾಜು, ಖಾಲಿದ್, ಆಲಿ, ರಾಮೇಗೌಡ, ಸತೀಶ್, ವಿಜಯ್, ದಸಂಸ ಮುಖಂಡರಾದ ಶಿವರಾಜು, ಪ್ರಕಾಶ್, ರಾಜುಚಿಕ್ಕಹುಣಸೂರು. ಕಾಂತರಾಜು, ವೆಂಕಟೇಶ್, ಚೆಲುವರಾಜು, ಡಿಎಚ್‌ಎಸ್ ಮುಖಂಡರಾದ ಮಲ್ಲೇಶ್,ಮಹದೇವು,ಶಿವರಾಮು,ಜಗದೀಶ್,ದರ್ಶನ್ ಸೇರಿದಂತೆ ಅನೇಕರಿದ್ದರು.