Advertisement

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಆಂದೋಲಾ ಶ್ರೀ ವಾಡಿ ಪ್ರವೇಶ ತಡೆಯಲು ಮನವಿ

04:37 PM Apr 14, 2022 | Team Udayavani |

ವಾಡಿ: ಪಟ್ಟಣದಲ್ಲಿ ಹಿಂದುಪರ ಸಂಘಟನೆಗಳ ವತಿಯಿಂದ ಏ.16ರಂದು ಶ್ರೀರಾಮ ಜಯಂತಿ ಆಚರಿಸಲು ನಿರ್ಧರಿಸಲಾಗಿದ್ದು, ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ, ಆಂದೋಲಾ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿಯನ್ನು ಮುಖ್ಯ ಭಾಷಣಕಾರರನ್ನಾಗಿ ಆಹ್ವಾನಿಸಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿ ಕೋಮು ಸೌಹಾರ್ದತೆ ಕದಡುವ ಹಿನ್ನೆಲೆ ಇರುವ ಸ್ವಾಮೀಜಿಯನ್ನು ಯಾವುದೇ ಕಾರಣಕ್ಕೂ ವಾಡಿ ನಗರ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಪ್ರಗತಿಪರ ಹೋರಾಟಗಾರ, ನ್ಯಾಯವಾದಿ ಶ್ರವಣಕುಮಾರ ಮೊಸಲಗಿ ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.

Advertisement

ಈ ಕುರಿತು ಗುರುವಾರ ಪಟ್ಟಣದ ಪೋಲಿಸ್ ಠಾಣೆಯ ಪಿಎಸ್ಐ ಮಹಾಂತೇಶ ಜಿ.ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಮೊಸಲಗಿ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸ್ವಾಮೀಜಿಯ ಪಾಲ್ಗೊಳ್ಳುವಿಕೆ ತಡೆಯಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ:ಅಸ್ಪೃಶ್ಯತೆ ಹೊಡೆದೋಡಿಸಲು ವಿನಯ ಸಾಮರಸ್ಯ ಯೋಜನೆ : ಸಚಿವ ಕೋಟ

ಹಿಂದೂ-ಮುಸ್ಲಿಂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿರುವ ವಾಡಿ ನಗರದಲ್ಲಿ ಕೆಲವರು ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಒಂದು ಸಮುದಾಯದ ವಿರುದ್ಧ ದ್ವೇಷ ಕಾರುವ ಆಂದೋಲಾ ಸ್ವಾಮೀಜಿ, ಸೌಹಾರ್ದತೆಯಿಂದ ಬದುಕುತ್ತಿರುವ ಹಿಂದೂ ಮುಸ್ಲಿಮರ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಅನೇಕ ಕಡೆ ಹೋದಲ್ಲೆಲ್ಲ ಕೋಮುವಾದದ ವಿಷ ಬೀಜ ಬಿತ್ತುತ್ತಿರುವ ಅನೇಕ ಪ್ರಸಂಗಗಳಿವೆ. ಇದು ಜಿಲ್ಲಾಡಳಿತದ ಗಮನಕ್ಕೂ ಇದೆ. ಶ್ರೀರಾಮ ಜಯಂತಿಯ ಹೆಸರಿನಲ್ಲಿ ಚಿತ್ತಾಪುರ ಮತಕ್ಷೇತ್ರದ ಪ್ರವೇಶ ಪಡೆದು ಕೋಮು ಕಿಡಿ ಹಚ್ಚುವ ತಂತ್ರ ರೂಪಿಸಿದ್ದಾರೆ. ಇವರ ಭಾಷಣಗಳಿಗೆ ಕಡಿವಾಣ ಬೀಳದಿದ್ದರೆ ಅಶಾಂತಿಯ ವಾತಾವರಣ ಸೃಷ್ಟಿಯಾಗುವ ಆತಂಕವಿದೆ. ಆದ ಕಾರಣ ಶ್ರೀಗಳ ಬಹಿರಂಗ ಭಾಷಣಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next