Advertisement
ಪಾಳ್ಯಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮಂಡ್ಯಂಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಊರ ಹೊರ ಭಾಗದಲ್ಲಿದ್ದು 35 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಬ್ಬರು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಲಾ ಆವರಣದಲ್ಲಿ ಮೂರು ಕೊಠಡಿಗಳಿದ್ದರೂ ಎರಡು ಕೊಠಡಿಗಳು ಪ್ರಯೋಜನೆಕ್ಕೆ ಇಲ್ಲದಂತಾಗಿದೆ. ಒಂದು ಕೊಠಡಿಯನ್ನು ಮಾತ್ರ ಪಾಠ ಮಾಡಲು ಉಪಯೋಗಿಸಬೇಕಾಗಿದ್ದು, ಮಕ್ಕಳಿಗೆ ತೊಂದರೆಯಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಶಿಥಿಲಾವಸ್ಥೆಯ ಕಟ್ಟಡವನ್ನು ಕೆಡವಿ ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಬೇಕೆಂದು ಗ್ರಾಮದ ವೆಂಕಟ ರವಣ, ನರಸಿಂಹಪ್ಪ, ಗಂಗುಲಪ್ಪ ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಪಾಳ್ಯಕೆರೆ ಸಿಆರ್‌ಪಿ ಐ.ವಿ.ಕೃಷ್ಣಾರೆಡ್ಡಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪಾಳ್ಯಕೆರೆ ಗ್ರಾಪಂ ಪಿಡಿಒ ಚಂದ್ರಶೇಖರ ಪ್ರತಿಕ್ರಿಯಿಸಿ, ಇತ್ತೀಚೆಗೆ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದ ಬಗ್ಗೆ ಪ್ರಸ್ತಾಪನೆ ಸಲ್ಲಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.