ಉಡುಪಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಮಾಜಿ ರಕ್ಷಣ ಸಚಿವ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರು ಇಡಬೇಕು ಎಂದು ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಯ ಸ್ಥಾಪಕ ತೋನ್ಸೆ ಜಯಕೃಷ್ಣ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಅವಿಭಜಿತ ದ.ಕ. ಜಿಲ್ಲೆಯ ಅಭಿ ವೃದ್ಧಿಗೆ ಅವರು ತಮ್ಮದೇ ಕೊಡುಗೆ ನೀಡಿದ್ದಾರೆ. ಮಂಗಳೂರು ಮತ್ತು ಮುಂಬಯಿ ನಡುವೆ ರೈಲು ಸಂಚಾ ರಕ್ಕೆ ವ್ಯವಸ್ಥೆ, ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಮಾಡುವ ಮೂಲಕ ಮೇಲ್ದರ್ಜೆಗೆ ಏರಿಸಲು ಸಹಕಾರ, ಕಾರವಾರದ ಸೀ ಬರ್ಡ್ ಯೋಜನೆ ರೂಪಿಸಿ ಗಮನ ಸೆಳೆದಿದ್ದಾರೆ. ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತ ಎಂದವರು ತಿಳಿಸಿದರು.
ಈ ಸಂಬಂಧ ಕೇಂದ್ರ ಸಚಿವ ರಾಜನಾಥ ಸಿಂಗ್, ಕೇಂದ್ರ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ರಾಗಿದ್ದಾಗ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಇವರೆಲ್ಲರೂ ಒಪ್ಪಿದ್ದಾರೆ. ಆದರೆ ಸ್ಥಳೀಯ ರಾಜಕಾರಣಿಗಳು ಇದಕ್ಕೆ ಒಪ್ಪುತ್ತಿಲ್ಲ ಎಂದರು.
ಸಂಘದ ಜಿಲ್ಲಾ ಪ್ರ. ಕಾರ್ಯದರ್ಶಿ ಅರುಣ್ ಪ್ರಕಾಶ್ ಶೆಟ್ಟಿ, ಸುರೇಂದ್ರ ಮೆಂಡನ್ ಉಪಸ್ಥಿತರಿದ್ದರು.