ಭಗವಾನ್‌ಗೆ ನೀಡಿರುವ ಭದ್ರತೆಯನ್ನು ಸರ್ಕಾರ ಹಿಂಪಡೆದು ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ವಿಶ್ವಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ಹೇಳಿದರು.
Advertisement
ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಭಗವಾನ್ ವಿರುದ್ಧ ಗುರುವಾರ ವಿಶ್ವಹಿಂದೂ ಪರಿಷತ್ ತಾಲೂಕು ಶಾಖೆ ಮತ್ತು ಹಿಂದೂ ಸಂಘಟನೆ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿ ತಾಲೂಕು ಕಚೇರಿ ಮುಂದೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಭಗವಾನ್ ಎಂದು ಹೆಸರಿಟ್ಟುಕೊಂಡು ಅದಕ್ಕೆ ವಿರುದ್ಧವಾಗಿ ಹಿಂದೂ ಧರ್ಮೀಯರ ದೇವರಾದ ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸುತ್ತದೆ. ಇಂತಹ ವ್ಯಕ್ತಿಯ ಬೇಜವಾಬ್ದಾರಿ ಮಾತುಗಳಿಂದ ಸಮಾಜದಲ್ಲಿ ಅಶಾಂತಿ ಅಸಹನೆ ಹೆಚ್ಚುತ್ತದೆ.
ಸಭೆಯಲ್ಲಿ ಮುಖಂಡರಾದ ಧರ್ಮಪ್ರಸಾದ್, ಬಿ.ಕೆ. ಶ್ರೀನಾಥ್, ರಾಮಚಂದ್ರ, ಆರ್.ಎಸ್. ಶೋಭ, ಹೇಮಾವತಿ, ವಿಶ್ವನಾಥ ರಾವ್, ಸುನೀಲ, ಸೋಮಯಾಜಿ, ಕಾ.ರ. ನಾಗರಾಜ್ ಮುಂತಾವದವರು ಭಾಗವಹಿಸಿ ಮಾತನಾಡಿದರು. ರಂಗಪ್ಪ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.