Advertisement

ಬಾಲಕಿ ಅತ್ಯಾಚಾರಿಗಳ ಬಂಧನಕ್ಕೆ ಆಗ್ರಹ

08:59 PM Feb 04, 2021 | Team Udayavani |

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನಲ್ಲಿ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಿಂದ ಜಿಲ್ಲೆಯ ಜನತೆ  ತಲೆತಗ್ಗಿಸುವಂತಾಗಿದೆ. ಬಾಲಕಿ ಮೇಲೆ ದೌರ್ಜನ್ಯ ನಡೆಸಿದ ಎಲ್ಲಾ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ  ಗುರಿಪಡಿಸಬೇಕೆಂದು ಕಾಂಗ್ರೆಸ್‌ ರಾಜ್ಯ ಮಹಿಳಾ ಉಪಾಧ್ಯಕ್ಷೆ, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಆಗ್ರಹಿಸಿದರು.

Advertisement

ಮಂಗಳವಾರ ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ ಪರಿಶಿಷ್ಟ ಜಾತಿ ಘಟಕ ಹಾಗೂ ಮಹಿಳಾ ಘಟಕದಿಂದ  ಶೃಂಗೇರಿ ತಾಲೂಕಿನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಶೀಘ್ರವೇ ಬಂ ಧಿಸಬೇಕೆಂದು ಆಗ್ರಹಿಸಿ  ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಉತ್ತರ ಪ್ರದೇಶ ರಾಜ್ಯದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಘಟನೆಗಳು ವರದಿಯಾಗುತ್ತಿತ್ತು. ರಾಜ್ಯದಲ್ಲೂ ಇಂತಹ ಘಟನೆಗಳು ವರದಿಯಾಗುತ್ತಿರುವುದು ಖಂಡನೀಯ. 17ಕ್ಕೂ ಹೆಚ್ಚು ಮಂದಿ ಅತ್ಯಾಚಾರ ಕೃತ್ಯ ಎಸಗಿದ್ದು, ಆಕೆಯನ್ನು ಬ್ಲಾಕ್‌ ಮೇಲ್ ಮಾಡಿ ತಮ್ಮ ವಿಕೃತಿ ಪ್ರದರ್ಶಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣ ಸಂಬಂಧ 17 ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದ್ದು, 8ಮಂದಿಯನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ.  ಕೂಡಲೇ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.

ಎಐಸಿಸಿ ಕಾರ್ಯದರ್ಶಿ ಸಂದೀಪ್‌ ಮಾತನಾಡಿ, ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಿಂದ ಜಿಲ್ಲೆಯ ಮಾನ ಹರಾಜಾಗುತ್ತಿದೆ. ಸಣ್ಣ ವಿಚಾರವನ್ನು ಮುಂದಿಟ್ಟುಕೊಂಡು ಬೆಂಕಿ ಹಚ್ಚುವ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ.ರವಿ, ಸಿ.ಎಂ. ರಾಜಕೀಯ  ಕಾರ್ಯದರ್ಶಿ ಜೀವರಾಜ್‌ ಪ್ರಕರಣಕ್ಕೆ ಸಂಬಂಧಿ ಸಿದಂತೆ ಏನು ಮಾತನಾಡುತ್ತಿಲ್ಲ. ಪ್ರಕರಣದ ಆರೋಪಿಗಳನ್ನು ಬಿಜೆಪಿ  ಖಂಡರು ರಕ್ಷಣೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

Advertisement

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ|ಅಂಶುಮಂತ್‌ ಮಾತನಾಡಿ, ಇದೊಂದು ಅಮಾನೀಯ ಘಟನೆಯಾಗಿದ್ದು, 5 ತಿಂಗಳಿಂದ ಬಾಲಕಿಗೆ  ಮಾನಸಿಕ,ದೈಹಿಕ ಹಿಂಸೆ ನೀಡಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿ ಸುವ ಮೂಲಕ  ಯುವ ಜನತೆಯಲ್ಲಿ ಕಾನೂನಿನ ಭಯ ಮೂಡಿಸಬೇಕೆಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಡಾ|ಡಿ.ಎಲ್‌. sವಿಜಯ್‌ಕುಮಾರ್‌, ಕಾಂಗ್ರೆಸ್‌ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಹೊನ್ನೇಶ್‌,  ಕಾಂಗ್ರೆಸ್‌ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವನಮಾನ ದೇವರಾಜ್‌ ಮಾತನಾಡಿದರು. ಪ್ರತಿಭಟನೆಗೂ ಮುನ್ನಾ ಕಾರ್ಯಕರ್ತರು ಆಜಾದ್‌ ಪಾರ್ಕ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅತ್ಯಾಚಾರ ಆರೋಪಿಗಳ ವಿರುದ್ಧ ಘೋಷಣೆ ಕೂಗಿದರು.

ಇದನ್ನೂ ಓದಿ :ಬಿಡಿಸಿಸಿ ಗಾದಿಗೆ ಸಚಿವ ಆನಂದ್ ಸಿಂಗ್‌ ಸ್ಪರ್ಧೆ?

ಪ್ರತಿಭಟನೆಯಲ್ಲಿ ಮುಖಂಡರಾದ ಎ.ಎನ್‌.ಮಹೇಶ್‌, ಅಕ್ಮಲ್‌, ನಗರಸಭೆ ಮಾಜಿ ಸದಸ್ಯ ರೂಬಿನ್‌ ಮೋಸೆಸ್‌, ಸಂಘದ ಜಿಲ್ಲಾಧ್ಯಕ್ಷ ರಸೂಲ್‌ ಖಾನ್‌, ಯುವ ಕಾಂಗ್ರೆಸ್‌ ನ ಶಿವಕುಮಾರ್‌, ಆದಿತ್ಯಗೌಡ, ನೂರಿ, ನಯಾಝ್, ಮಹಿಳಾ ಕಾಂಗ್ರೆಸ್‌ನ ಗಾಯತ್ರಿ, ಚೇತನಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next