Advertisement

ದೇಗುಲ ಸರ್ಕಾರಿ ವಶಕ್ಕೆ ಪಡೆಯಲು ಆಗ್ರಹ

01:30 PM Mar 16, 2022 | Team Udayavani |

ಚಿತ್ತಾಪುರ: ತಾಲೂಕಿನ ದಂಡಗುಂಡ ಗ್ರಾಮದ ಐತಿಹಾಸಿಕ ಶ್ರೀ ಬಸವಣ್ಣ ದೇವಸ್ಥಾನವು ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು, ಈಗಿರುವ ಆಡಳಿತ ಮಂಡಳಿ ರದ್ದುಪಡಿಸಿ ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

Advertisement

ಈ ವೇಳೆ ದೇವಸ್ಥಾನದ ಪೂಜಾರಿ ವಿದ್ಯಾನಂದ ಹಿರೇಮಠ ಸುದ್ದಿಗಾರರೊಂದಿಗೆ ಮಾತನಾಡಿ, ದಂಡಗುಂಡ ಗ್ರಾಮದ ಬಸವಣ್ಣ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಎಂದು ಕಳೆದ 2003ರಲ್ಲಿ ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಆದರೆ ಸಂಬಂಧಟಪ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲ್ಲಿಯ ವರೆಗೆ ಈ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಿಲ್ಲ ಎಂದು ಆರೋಪಿಸಿದರು.

ದೇವಸ್ಥಾನದ ಟ್ರಸ್ಟ್‌ ಆಡಳಿತ ಮಂಡಳಿ ಅನಧಿಕೃತವಾಗಿ ಮುಂದುವರಿದಿದೆ. ಅಲ್ಲದೇ ದೇವಸ್ಥಾನದ ಲೆಕ್ಕಪತ್ರವನ್ನು ಟ್ರಸ್ಟ್‌ ಸದಸ್ಯರೇ ನೋಡಿಕೊಳ್ಳುತ್ತಿದ್ದಾರೆ. ದೇಗುಲಕ್ಕೆ ಸಂಬಂದಿಸಿದಂತೆ ಬ್ಯಾಂಕ್‌ ಖಾತೆಯಲ್ಲಿ ಕೋಟ್ಯಂತರ ರೂ., ಅಪಾರವಾದ ಬಂಗಾರದ ಒಡವೆಗಳು, ಬೆಳ್ಳಿ, ಕಂಚಿನ ಗಂಟೆಗಳು ಇವೆ. ಆದ್ದರಿಂದ ದೇವಸ್ಥಾನದ ಈಗಿನ ಆಡಳಿತ ಮಂಡಳಿ ಸದಸ್ಯರನ್ನು ವಜಾಗೊಳಿಸಿ ಮುಜರಾಯಿ ಇಲಾಖೆಗೆ ವಶಪಡಿಸಿಕೊಳ್ಳಬೇಕು. ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಿ ಸದಸ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಗುರುರಾಜ ಪೂಜಾರಿ, ಶರಣಗೌಡ ಪೊಲೀಸ್‌ ಪಾಟೀಲ, ಮಲ್ಲಣ್ಣ ಕೋರೆ, ಶಿವಲಿಂಗರೆಡ್ಡಿ, ಬಸ್ಸಪ್ಪ ಆಡಕಾಯಿ, ವಿಶಾಲ ಸೌಕಾರ, ಶಿವಪ್ಪ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next