Advertisement

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

08:46 PM Nov 26, 2024 | Team Udayavani |

ಮಂಗಳೂರು: ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆ ಕ್ಯಾನ್ಸರ್‌ ಕಾರಕವೆಂದು ಸಾಬೀತು ಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ ಪ್ರಕಟಿಸಿರುವುದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಎಆರ್‌ಸಿ ವಿರುದ್ಧ ತುರ್ತು ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಸನ್ಮಾನ್ಯ ಜೆ.ಪಿ.ನಡ್ಡಾ ಅವರನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಒತ್ತಾಯಿಸಿದ್ದಾರೆ.

Advertisement

ಮೂಲ ಸಂಶೋಧನಾ ವರದಿಗಳಲ್ಲಿ ತಂಬಾಕು ಸೇವನೆಯ ಪರಿಣಾಮದ ಕುರಿತು ಕೇಂದ್ರೀಕರಿಸಿ ಸಂಶೋಧನೆ ನಡೆಸಲಾಗಿತ್ತು, ಹಾಗಿದ್ದರೂ ಅಡಿಕೆ ಕ್ಯಾನ್ಸರ್‌ ಕಾರಕವೆಂದು ಬಿಂಬಿಸುವ ಸಲುವಾಗಿ ಮಾದರಿ ಸಂಖ್ಯೆ ಮತ್ತು ಶೀರ್ಷಿಕೆಯನ್ನು ತಿರುಚಿ ವರದಿ ಪ್ರಕಟಿಸಿರುವ ಡಬ್ಲ್ಯೂ ಎಚ್‌ಒ ಮತ್ತು ಐಎಆರ್‌ಸಿ ಕ್ರಮ ಅಕ್ಷಮ್ಯ. ಇದು ಅಡಿಕೆ ಕೃಷಿಯನ್ನೆ ಜೀವನಾಧಾರವಾಗಿ ನಂಬಿರುವ ರೈತರ ಬದುಕಿಗೆ ಬಲವಾದ ಪೆಟ್ಟು ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯನ್ನು ವರ್ಗೀಕರಿಸುವುದರ ಕುರಿತು ನ್ಯಾಯೋಚಿತ ವಿಮರ್ಶೆ ನಡೆಸಿ ರೈತರಿಗೆ ನ್ಯಾಯ ದೊರಕಿಸಿ ಕೊಡುವಂತೆ ಕೇಂದ್ರ ಸಚಿವರಲ್ಲಿ ವಿನಂತಿ ಮಾಡಲಾಗಿದೆ. ಅಡಿಕೆ ಲಕ್ಷಾಂತರ ಜನರ ಜೀವನದ ಆಧಾರಸ್ತಂಭ. ಅದರ ತಪ್ಪಾದ ವರ್ಗೀಕರಣದಿಂದ ಅದನ್ನೆ ನಂಬಿ ಬದುಕುತ್ತಿರುವ ಜನರ ಜೀವನ ಹಾಳಾಗುವುದಲ್ಲದೇ ,ಅಡಿಕೆಯ ವೈಜ್ಞಾನಿಕ ಉಪಯೋಗಗಳಿಂದ ಸಮಾಜ ವಂಚಿತವಾಗಲಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next