Advertisement

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

12:09 AM Nov 22, 2024 | Team Udayavani |

ಬೆಂಗಳೂರು: ಕಸ್ತೂರಿ ರಂಗನ್‌ ವರದಿ ತಿರಸ್ಕರಿಸುವಂತೆ ಆಗ್ರಹಿಸಿ ಕೇಂದ್ರ ಸರಕಾರದ ವಿರುದ್ಧ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ “ಬೆಂಗಳೂರು ಚಲೋ’ ಹೋರಾಟದ ಮೂಲಕ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಆಗ್ರಹಿಸಿತು.

Advertisement

ಕಸ್ತೂರಿರಂಗನ್‌ ವರದಿ ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಒತ್ತಾಯಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪ್ರತಿಭಟನಕಾರರು ಕೇಂದ್ರ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಸಿದರು.

ಸಚಿವರಾದ ಎಚ್‌.ಕೆ. ಪಾಟೀಲ್ ಹಾಗೂ ಎಚ್‌.ಸಿ. ಮಹದೇವಪ್ಪ ಪ್ರತಿಭಟನ ಸ್ಥಳಕ್ಕೆ ಭೇಟಿ ಪ್ರತಿಭಟನ ನಿರತರ ಜತೆ ಸಮಾಲೋಚಿಸಿ ಸರಕಾರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ಕೇಂದ್ರದ ಮೇಲೆ ಒತ್ತಡ ತರಬೇಕು. ಅರಣ್ಯವಾಸಿಗಳ ಭೂಮಿಯ ಹಕ್ಕಿನ ಸಮಸ್ಯೆ ನಿವಾರಿಸಲು ಆಗ್ರಹಿಸುವಂತೆ ಆಗ್ರಹಿಸಿದರು. ಕಸ್ತೂರಿ ರಂಗನ್‌ ವರದಿ ಜಾರಿಯಾದಲ್ಲಿ ಅರಣ್ಯ, ಅರಣ್ಯದಂಚಿನ ನಿವಾಸಿಗಳ ಜೀವನದ ನೆಮ್ಮದಿ ಹಾಳಾಗಲಿದೆ ಎಂದು ಪ್ರತಿಭಟನ ನಿರತರು ಆತಂಕ ವ್ಯಕ್ತಪಡಿಸಿದರು. ಮುಂದೆ ದಿಲ್ಲಿ ಚಲೋ ಹೋರಾಟದ ಕುರಿತು ಪ್ರತಿಭಟನೆಯ ಮುಖಂಡರು ಘೋಷಿಸಿದರು.

ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿ, 33 ವರ್ಷಗಳಿಂದ ಹೋರಾಟ ನಿರಂತರವಾಗಿದೆ. ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಮಳೆ ಬೀಳುವುದರಿಂದ ಪ್ರಮುಖ ಬೆಳೆ ಏಲಕ್ಕಿ, ಕಾಫಿ, ಕಾಳು ಮೆಣಸು ಬೆಳೆ ಸಂಕಷ್ಟದಲ್ಲಿದ್ದು, ಬಹುತೇಕ ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಬಹುತೇಕ ರೈತರು ತಮ್ಮ ಜಮೀನುಗಳಲ್ಲಿ ಬ್ಯಾಂಕ್‌ಗ ಳಿಂದ‌ ಸಾಲ ಪಡೆದು ಹೋಂ ಸ್ಟೇಗಳನ್ನು ನಡೆಸಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಒಂದು ವೇಳೆ ಯೋಜನೆ ಜಾರಿಯಾದರೆ ಕೃಷಿ ಚಟುವಟಿಕೆ, ತೋಟ, ಹೋಂ ಸ್ಟೇಗಳನ್ನು ತೆರವುಗೊಳಿಸಬೇಕಾಗಿ ಬಂದು ಸಂಕಷ್ಟದಲ್ಲಿ ಸಿಲುಕಬೇಕಾಗುತ್ತದೆ ಎಂದರು.

Advertisement

ವರದಿ ಅನುಷ್ಠಾನವಾದರೆ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಅತಿ ಸೂಕ್ಷ್ಮ ಪರಿಸರ ವಲಯವಾಗಿ ಪರಿವರ್ತನೆಯಾಗುತ್ತದೆ. ಇಲ್ಲಿ ಮಾನವ ಹಸ್ತಕ್ಷೇಪವನ್ನು ಮಾಡುವಂತೆಯೇ ಇಲ್ಲ. ಇಡೀ ಭೂ ಭಾಗ ಕೇಂದ್ರದ ಸುಪರ್ದಿಗೆ ಬರುತ್ತದೆ. ಆದಿವಾಸಿಗಳನ್ನು ಒಕ್ಕಲು ಎಬ್ಬಿಸಬೇಕಾಗುತ್ತದೆ. ಯಾವುದೇ ಕೈಗಾರಿಕೆ ನಡೆಸಲು ಕಷ್ಟ ಸಾಧ್ಯವಾಗಲಿದೆ. ಆದ್ದರಿಂದ ಕಸ್ತೂರಿರಂಗನ್‌ ವರದಿ ತಿರಸ್ಕರಿಸಬೇಕು ಎಂಬುದು ಪ್ರತಿಭಟನ ನಿರತರ ವಾದವಾಗಿದೆ.

ಅಧಿವೇಶನದಲ್ಲಿ ಚರ್ಚೆ
ಪ್ರತಿಭಟನ ಸ್ಥಳಕ್ಕೆ ಭೇಟಿ ನೀಡಿದ ಕಾನೂನು ಸಚಿವ ಎಚ್‌.ಕೆ. ಪಾಟೀಲ್ ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಮಾತನಾಡಿ, ಕಸ್ತೂರಿ ರಂಗನ್‌ ವರದಿ ತಿರಸ್ಕರಿಸುವ ಹೋರಾಟಕ್ಕೆ ರಾಜ್ಯ ಸರಕಾರದ ಬೆಂಬಲ ವ್ಯಕ್ತಪಡಿಸಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಅರಣ್ಯ ಹಕ್ಕು ಕಾಯಿದೆಯಲ್ಲಿ ಇರುವ ಸಮಸ್ಯೆಗಳ ಕುರಿತು ತಜ್ಞರೊಂದಿಗೆ ಸಭೆ ನಡೆಸಲಾಗುವುದು ಎಂಬ ಭರವಸೆ ನೀಡಿದರು.

ಸಚಿವ ಎಚ್‌.ಸಿ. ಮಹಾದೇವಪ್ಪ ಮಾತನಾಡಿ, ಅರಣ್ಯ ಹಕ್ಕು ನೀಡುವ ವಿಚಾರದಲ್ಲಿ ಸರಕಾರವು ಸಕಾರಾತ್ಮಕ ನಿಲುವನ್ನು ತೆಗೆದುಕೊಳ್ಳಲಿದೆ ಎಂದು ಆಶ್ವಾಸನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next