Advertisement

ಹದಗೆಟ್ಟಿರುವ ರಸ್ತೆ ದುರಸ್ತಿಗೆ ಆಗ್ರಹ

07:57 AM Jun 28, 2019 | Team Udayavani |

ಬಾಗೇಪಲ್ಲಿ: ಚುನಾವಣೆಯಲ್ಲಿ ಮತದಾನಕ್ಕೆ ಬಹಿಷ್ಕಾರ ಹಾಕಿ ಸರ್ಕಾರದ ಗಮನ ಸೆಳೆದಿದ್ದರೂ ಹದಗೆಟ್ಟಿರುವ ಐವಾರ‌್ಲಪಲ್ಲಿ ಕ್ರಾಸ್‌ನಿಂದ ಮರವಪಲ್ಲಿ, ಸಿದ್ದನಪಲ್ಲಿ, ಕಾಗಾನಪಲ್ಲಿ, ಮೈನಾಗಾನಪಲ್ಲಿ ರಸ್ತೆಯನ್ನು ದುರಸ್ತಿ ಮಾಡಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಉಪ ವಿಭಾಗದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಜೆಸಿಬಿ ಪಿ. ಮಂಜುನಾಥರೆಡ್ಡಿ ಮಾತನಾಡಿ, ಹಲವು ದಶಕಗಳಿಂದಲೂ ರಸ್ತೆಯಲ್ಲಿ ಹಳ್ಳ ಗುಣಿಗಳು ಬಿದ್ದು ಸಂಪೂರ್ಣವಾಗಿ ಹಾಳಾಗಿದೆ. ಬಸ್‌ ಸಂಚಾರವಿಲ್ಲದ ಈ ರಸ್ತೆಯಲ್ಲಿ ಆಟೋ ಚಾಲಕರು ಬರಲು ನಿರಾಕರಿಸುತ್ತಾರೆ.

ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಿ ಬರಲು ಐವಾರ‌್ಲಪಲ್ಲಿ ಕ್ರಾಸ್‌ಗೆ 3 ಕಿ.ಮೀ ನಡೆದು ನಂತರ ಬಸ್‌ನಲ್ಲಿ ಪ್ರಯಾ ಣಿಸಬೇಕಾಗಿದೆ. ರೋಗಿಗಳ ಪರಿಸ್ಥಿತಿ ಕಳವಳಕಾರಿಯಾಗಿದೆ. ಈ ಬಗ್ಗೆ ಅನೇಕ ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿ ಗಳ ಗಮನಕ್ಕೆ ತಂದರೂ ಪ್ರಯೋಜನವಾ ಗಿಲ್ಲ. ರಸ್ತೆ ಕಾಮಗಾರಿ ಪ್ರಾರಂಭ ಮಾಡು ವವರಿಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.

ತಾಲೂಕು ದಂಡಾಧಿಕಾರಿ ಎಂ.ನಾಗರಾಜ್‌ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭನಕಾರರೊಂದಿಗೆ ಮಾತುಕತೆ ನಡೆಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅನುದಾನ ಬಿಡು ಗಡೆ ಮಾಡಿಸಿ ರಸ್ತೆ ಕಾಮಗಾರಿ ಕೈಗೆತ್ತಿ ಕೊಳ್ಳಲಾಗುವುದು ಎಂದು ಭರವಸೆ ನೀಡಿ ದರು. ಪ್ರತಿಭಟನೆಯಲ್ಲಿ ತಾಲೂಕು ಸಿಪಿಎಂ ಕಾರ್ಯದರ್ಶಿ ಚನ್ನರಾಯಪ್ಪ, ತಾಪಂ ಸದಸ್ಯ ಶ್ರೀರಾಮನಾಯ್ಕ ,ಡಿವೈಎಫ್‌ಐ ಅಧ್ಯಕ್ಷ ಬಿ.ಎಂ.ಹೇಮಚಂದ್ರ ಮತ್ತು ಗ್ರಾಮಸ್ಥರಾದ ಶಂಕರನಾಯ್ಕ , ಆದಿನಾರಾಯಣ ನಾಯ್ಕ, ಶಿವಾನಂದರೆಡ್ಡಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next