Advertisement

ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಆಗ್ರಹ

01:19 PM Sep 04, 2020 | Suhan S |

ಪಿರಿಯಾಪಟ್ಟಣ: ಕೋವಿಡ್‌-19 ಪ್ಯಾಕೇಜ್, ಉದ್ಯೋಗ ಭದ್ರತೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಪಿರಿಯಾಪಟ್ಟಣ ತಾಲೂಕು ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯಿಂದ ಶಿರಸ್ತೇದಾರ್‌ ಶಕೀಲಾ ಬಾನು ಅವರಿಗೆ ಮನವಿ ಸಲ್ಲಿಸಿದರು.

Advertisement

ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಅಧ್ಯಕ್ಷ ಡಾ.ಎನ್‌.ಸೋಮಣ್ಣ ಮಾತನಾಡಿ, ರಾಜ್ಯದ ವಿವಿಧ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸೇವಾ ಭದ್ರತೆ ನೀಡುವ ಮೂಲಕ ಅವರನ್ನು ಕಾಯಂಗೊಳಿಸಬೇಕು. ಕೋವಿಡ್ ದಿಂದ ಅತಿಥಿ ಉಪನ್ಯಾಸಕರಿಗೆ ಆರ್ಥಿಕ ಸಮಸ್ಯೆಯಾಗಿದೆ. ಬೀದಿ ಬದಿ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದು, ಸಂಕಷ್ಟದಲ್ಲಿ ಸರ್ಕಾರ ಇವರ ಬಗ್ಗೆ ಕಾಳಜಿ ತೋರಬೇಕು. ನಿಗದಿತ ಸಮಯಕ್ಕೆ ವೇತನ ಪಾವತಿಯಾಗಿಲ್ಲ, ಉಪನ್ಯಾಸಕರಿಗೆ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿ: ಉಪನ್ಯಾಸಕ ಎನ್‌.ನಂಜುಂಡಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಇರುವ ಉಪನ್ಯಾಸಕರಲ್ಲಿ ಶೇ.70ರಷ್ಟು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕಾಯಂ ಉಪನ್ಯಾಸಕರಿಗಿಂತಲೂ ಹೆಚ್ಚು ಸಮಯ ಕರ್ತವ್ಯ ನಿರ್ವಹಿಸುತ್ತಿದ್ದರೂ ಅವರಂತೆ ನಮಗೆ ಯಾವುದೇ ಸೇವಾ ಭದ್ರತೆ ಇಲ್ಲ. ರಾಜ್ಯ ಸರ್ಕಾರ ಕೂಡಲೇ ಎಲ್ಲ ಅತಿಥಿ ಉಪನ್ಯಾಸಕರಿಗೆ ಕೋವಿಡ್‌-19 ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಬೇಕು. ಅತಿಥಿ ಉಪನ್ಯಾಸಕರಿಗೆ ಸೇವಾ ಪ್ರಮಾಣ ಪತ್ರ, ಗುರುತಿನ ಚೀಟಿ ನೀಡಬೇಕು. ಕಡಿಮೆ ವೇತನದಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದರು.

ಅತಿಥಿ ಉಪನ್ಯಾಸಕರಾದ ಪುಟ್ಟಮಾದಯ್ಯ, ಡಾ.ಮಂಜುನಾಥ್‌, ಸಿದ್ದರಾಮೇಗೌಡ, ಶಫಿ ಅಹಮದ್‌, ಸಾಯಿಂತಾಜ್‌, ರಾಜೇಶ್‌, ಕಾಂತರಾಜ್‌, ರಂಗನಾಥ್‌, ಶಿವಕುಮಾರ್‌, ಆರ್‌.ಪಿ. ಸಂದೀಪ್‌, ರೋಹಿತ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next