Advertisement

ಅತಿಥಿ ಶಿಕ್ಷಕರ ಸಮಸ್ಯೆ ಶೀಘ್ರ ಬಗೆಹರಿಸಲು ಆಗ್ರಹ

05:45 PM Jan 05, 2022 | Team Udayavani |

ಯಾದಗಿರಿ: ಸೇವಾ ಭದ್ರತೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೂಡಲೇ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ನಗರದ ಸುಭಾಷ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

Advertisement

ಇದೇ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಹಲವು ದಿನಗಳಿಂದ ಅತಿಥಿ ಉಪ್ಯಾಸಕರು ಸೇವಾ ಭದ್ರತೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವುದರಿಂದ ಪಾಠಗಳು ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸಿ ತಕ್ಷಣವೇ ಪೂರ್ಣ ಪ್ರಮಾಣದ ತರಗತಿ ನಡೆಸಲು ಕ್ರಮಕೈಗೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅಗತ್ಯವಿರುವ ಮೂಲ ಸೌಕರ್ಯ, ಬೋಧನಾ ತಂಡ ನೀಡಬೇಕು. ಅತಿಥಿ ಉಪನ್ಯಾಸಕರು ಹೋರಾಟ ಮಾಡುವುದರಿಂದ ತರಗತಿ ನಡೆಯುತ್ತಿಲ್ಲ. ಶೀಘ್ರದಲ್ಲೇ ಇದಕ್ಕೆ ಪರಿಹಾರ ನೀಡದಿದ್ದರೆ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದರು.

ವಿಭಾಗ ಸಂಘಟನಾ ಕಾರ್ಯದರ್ಶಿ ಧನಂಜಯ, ವಿಭಾಗೀಯ ಪ್ರಮುಖ ರಾಜಶೇಖರ ಭಾವಿಮನಿ, ನಗರಾಧ್ಯಕ್ಷರು ಡಾ| ಕೃಷ್ಣಮೂರ್ತಿ ಕುಲಕರ್ಣಿ, ಜಿಲ್ಲಾ ಸಹ ಸಂಚಾಲಕ ಅಶೋಕ ಗುತ್ತೇದಾರ, ನಗರ ಕಾರ್ಯದರ್ಶಿ ಬಸವರಾಜ ನಕ್ಕಲ್‌, ತಾಲೂಕು ಸಂಚಾಲಕ ಗವಿಲಿಂಗ ಹೊನಗೇರಾ, ವೀರೇಶ, ಸನ್ನಿ ಮುಂಡ್ರಗಿ, ಮೌನೇಶ ಎಸ್‌., ಗಿರೀಶ, ವಿಶ್ವ, ಲಕ್ಷ್ಮಣ, ಚನ್ನು, ಮಶೆಮ್ಮ ಎಂ., ಗೀತಾ ಎಸ್‌., ಮೌನೇಶ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next