Advertisement

ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಆಗ್ರಹ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

11:43 AM Nov 01, 2019 | Team Udayavani |

ಕಲಬುರಗಿ: ನಗರದಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಘೋಷಿಸಲು ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ‌

Advertisement

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ರಾಜ್ಯ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ, ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ, ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು, ಧ್ವಜಾರೋಹಣ ಮಾಡಲು ಮುಂದಾವರು. ಈ ವೇಳೆ ದಾರಿ ಮಧ್ಯೆ ತಡೆದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ‌

ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಹದಿನೈದಕ್ಕೂ ಹೆಚ್ಚು ಕಾರ್ಯಕರ್ತರ ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next