ಸಂಡೂರು: ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ಪರಿಹಾರ ದೊರಕಿಸಿಕೊಡಬೇಕೆಂದು ಶಾಸಕ ಈ. ತುಕಾರಾಂ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಚೌಗೂಳಿ ಪರಶುರಾಮಪ್ಪ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ರೂಪಿಸಿರುವ ಯೋಜನೆಗಳ ಪ್ರಗತಿಗಾಗಿ ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಪ್ರಮುಖ ಬೇಡಿಕೆಗಳಾದ ಕೇಂದ್ರ ಸರ್ಕಾರಿ ನೌಕರರಿಗೆ ಸಮನಾದ ವೇತನ, ಭತ್ತೆ ಹಾಗೂ ನೂತನ ಪಿಂಚಣಿ ರದ್ದುಪಡಿಸುವುದು ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ, ಶಿಕ್ಷಣ ಇಲಾಖೆಯಲ್ಲಿನ ನೇಮಕಾತಿ ತಿದ್ದುಪಡಿ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಸಬೇಕೆಂದು ಒತ್ತಾಯಿಸಿದರು.
ಪ್ರಧಾನ ಕಾರ್ಯದರ್ಶಿ ಶಿಕ್ಷಕಿ ಉಲ್ಲೇಶಿ ಹಾಗೂ ರಾಜ್ಯ ಪರಿಷತ್ ಸದಸ್ಯ ಈಶ್ವರಪ್ಪ, ಗೌರವಾಧ್ಯಕ್ಷ ಸಿದ್ದಣ್ಣ ಯಳವಾರ ಹಾಗೂ ಸದಸ್ಯರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುನೀಲ್ ಆರ್., ಪ್ರಧಾನ ಕಾರ್ಯದರ್ಶಿ ತಮ್ಮಪ್ಪ ಹಾಗೂ ಸಮಸ್ತ ಶಿಕ್ಷಕರು, ನಾಮ ನಿರ್ದೇಶಿತ ಸದಸ್ಯರು ಇತತರು ಉಪಸ್ಥಿತರಿದ್ದರು.