Advertisement

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

07:27 PM Jan 14, 2021 | Team Udayavani |

ಹಿರಿಯೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ ಮಾತನಾಡಿ, ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕೃಷಿಗೆ ಸಂಬಂಧಿಸಿದ ಯೋಜನೆಗಳಲ್ಲಿ ದುರುಪಯೋಗವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

Advertisement

2017ರಿಂದ 2020 ರವರೆಗೆ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳಿಗೆ ಇದುವರೆಗೂ ಬಿಲ್‌ ಆಗಿಲ್ಲ. ವಸತಿ ಯೋಜನೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಇರುವ 90 ಮಾನವ ದಿನಗಳ ಕೂಲಿ ಹಣ ಬಾಕಿ ಇದ್ದು, ಫಲಾನುಭವಿಗಳಿಗೆ ಮಂಜೂರು ಮಾಡಬೇಕು. ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ವಸತಿ ಯೋಜನೆಯಡಿ ಮನೆ ಹಂಚಿಕೆಯಲ್ಲಿ ದುರುಪಯೋಗ ಆಗಿರುವುದು ಕಂಡು ಬಂದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕಂಪ್ಯೂಟರ್‌ ಆಪರೇಟರ್‌ಗಳು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಅವರನ್ನು ವರ್ಗಾವಣೆ ಮಾಡಬೇಕು.

ಇದನ್ನೂ ಓದಿ:ವಿಜಯಪುರ ಜಿಲ್ಲೆಗೆ 9500 ಡೋಸ್ ಕೋವಿಶೀಲ್ಡ್ ವ್ಯಾಕ್ಸಿನ್ ಆಗಮನ

ಪ್ರತಿ ಗ್ರಾಮಗಳಲ್ಲಿ ಬೀದಿದೀಪಗಳ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಜಿಪಂ ಉಪ ಕಾರ್ಯದರ್ಶಿ ಮಹಮ್ಮದ್‌ ಮುಬಿನ್‌ ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಆರ್‌. ರಂಗಸ್ವಾಮಿ, ಸಿದ್ದರಾಮಣ್ಣ, ಸಿದ್ದಪ್ಪ, ರಂಗಸ್ವಾಮಿ, ಶಿವಣ್ಣ, ಎಂ. ತಿಮ್ಮಾರೆಡ್ಡಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next