Advertisement

ಗ್ರಾಮೀಣದಲ್ಲಿನ ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಆಗ್ರಹ

09:31 AM Apr 20, 2022 | Team Udayavani |

ಸೇಡಂ: ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ದಲಿತಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

Advertisement

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಚಿಂಚೋಳಿ ಉಪ ವಿಭಾಗದ ವತಿಯಿಂದ ಹಮ್ಮಿಕೊಂಡ ದಲಿತ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖಂಡರು ಈ ಕುರಿತು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಯುವ ಮುಖಂಡ ವಿಲಾಸಗೌತಂ ನಿಡಗುಂದಾ ಮಾತನಾಡಿ, ಅನೇಕ ಕಡೆ ಡಾ| ಬಿ.ಆರ್‌. ಅಂಬೇಡ್ಕರ್‌ ಮೂರ್ತಿ ಸ್ಥಾಪನೆಗೆ ಅವಕಾಶ ಕಲ್ಪಿಸಿಲ್ಲ. ದಲಿತರ ಮೇಲಾಗುತ್ತಿರುವ ದೌರ್ಜನ್ಯಗಳು ನಿಲ್ಲುತ್ತಿಲ್ಲ. ಪ್ರತಿಯೊಂದು ಗ್ರಾಮದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಅಬಕಾರಿ ಇಲಾಖೆಗೆ ಮಾಹಿತಿ ಇದ್ದರೂ ಸುಮ್ಮನಿದೆ ಎಂದರು.

ದಲಿತ ಮುಖಂಡ ಶಂಭುಲಿಂಗ ನಾಟೀಕಾರ, ತಹಶೀಲ್ದಾರ್‌ ಬಸವರಾಜ ಬೆಣ್ಣೆಶಿರೂರ, ಡಿವೈಎಸ್ಪಿ ಬಸವರಾಜ ಹೀರಾ, ಸಿಪಿಐ ಆನಂದರಾವ್‌, ಸಂದೀಪಸಿಂಗ್‌ ಮುರಗೋಡ, ಅಬಕಾರಿ ಸಿಪಿಐ ರವಿಕುಮಾರ ಪಾಟೀಲ, ಪಿಎಸ್‌ಐ ಸೋಮಲಿಂಗ ಒಡೆಯರ್‌, ಪುರಸಭೆ ಮುಖ್ಯಾಧಿಕಾರಿ ಪ್ರಹ್ಲಾದ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next